ಮಂಗಳೂರು: ಕಾಂಗ್ರೇಸ್ ಕಚೇರಿಗೆ ಮುತ್ತಿಗೆ - ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಪಾಕಿಸ್ತಾನ ಪರ ಘೋಷಣೆ – ಕಾಂಗ್ರೇಸ್ ಕಚೇರಿಗೆ ಮುತ್ತಿಗೆ ಯತ್ನ

ಮಂಗಳೂರು : ರಾಜ್ಯಸಭೆ ಚುನಾವಣೆಯ ಬಳಿಕ ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ‌

ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಮಲ್ಲಿಕಟ್ಟೆಯಲ್ಲಿ ಕಾಂಗ್ರೇಸ್ ಕಚೇರಿಗೆ ಮುತ್ತಿಗೆ ಹಾಕಲು ಬಂದಿದ್ದಾರೆ. ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯ ಸುತ್ತ ಬಿಗಿ ಪೊಲೀಸ್ ಕಾವಲು ಹಾಕಲಾಗಿತ್ತು. ಕಾಂಗ್ರೆಸ್ ಕಚೇರಿ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ನಿನ್ನೆ ಸಂಜೆಯ ವೇಳೆಗೆ ರಾಜ್ಯಸಭೆ ಚುನಾವಣೆ ಗೆದ್ದ ನಾಸಿರ್ ಹುಸೇನ್ ಪರವಾಗಿ ಬೆಂಬಲಿಗರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆಂದು ಆರೋಪ ಕೇಳಿಬಂದಿದೆ. ಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗುತ್ತಾ ಮಲ್ಲಿಕಟ್ಟೆಯಲ್ಲಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದು ವಾಹನಗಳಲ್ಲಿ ಹತ್ತಿಸಿ ಕರೆದೊಯ್ದರು. 

ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕೂಡಾ ಸ್ಥಳದಲ್ಲಿ ಜಮಾಯಿಸಿ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು. 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!