ಬಂಟ್ವಾಳ: ಚರ್ಚ್ ಧರ್ಮಗುರುವಿನಿಂದ ವೃದ್ಧ ದಂಪತಿಗೆ ಹಲ್ಲೆ - ದೂರು ದಾಖಲು
ಪಾದ್ರಿಯಿಂದ ವೃದ್ಧ ದಂಪತಿಗೆ ಹಲ್ಲೆ: ವೀಡಿಯೊ ವೈರಲ್

ಬಂಟ್ವಾಳ: ಚರ್ಚ್ ನ ಧರ್ಮಗುರುವೊಬ್ಬರು ವೃದ್ಧ ದಂಪತಿಗೆ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚ ಗ್ರಾಮದ ಪರಿಯಾಲ್ತಡ್ಕ ಎಂಬಲ್ಲಿ ನಡೆದಿದೆ. ಫೆ.29ರಂದು ಈ ಘಟನೆ ನಡೆದಿದ್ದು ಈ ಕುರಿತಾದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಪುಣಚ ಗ್ರಾಮದ ಎರ್ಮೆತ್ತಡ್ಕ ನಿವಾಸಿ ಗ್ರೆಗರಿ ಮೊಂತೇರೊ(79ವ.) ದಂಪತಿ ಮನೆಗೆ ಚರ್ಚ್ ಮನೇಲ ಪರಿಯಾಲ್ತಡ್ಕದ ಕ್ರೈಸ್ಟ್ ಕಿಂಗ್ ಪ್ಯಾರಿಷ್ ನ ಧರ್ಮಗುರು ಫಾ.ನೆಲ್ಸನ್ ಓಲಿವೆರಾರವರು ಮನೆ ಶುದ್ಧ ಭೇಟಿ ನಿಮಿತ್ತ ತೆರಳಿದ್ದರು. ಈ ಸಂದರ್ಭದಲ್ಲಿ ಧರ್ಮಗುರು ಫಾ.ನೆಲ್ಸನ್ ರವರು ಪ್ರಾಯಸ್ಥ ದಂಪತಿ ಚರ್ಚ್ ಗೆ ಯಾವುದೇ ದೇಣಿಗೆ, ವಂತಿಗೆ ನೀಡದೆ ಸಹಕರಿಸುತ್ತಿಲ್ಲ ಎಂದೆಲ್ಲ ಹೇಳಿ ಆ ದಂಪತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಮಾತ್ರವಲ್ಲ ಕಾಲರ್ ಹಿಡಿದು ಮಾರುದ್ಧ ದೂರ ಎಳೆದುಕೊಂಡು ಹೋಗಿ ಹೊಡೆಯುತ್ತಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಹಲ್ಲೆ ಬಗ್ಗೆ ಸಂತ್ರಸ್ತ ದಂಪತಿ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪಾದ್ರಿ ನೆಲ್ಸನ್ ಒಲಿವೆರಾ ಮನೆ ಆಶೀರ್ವಾದಕ್ಕೆ ತೆರಳಿದ ವೇಳೆ ಮನೆಯ ಹೊರಗೆ ವೃದ್ಧ ದಂಪತಿ ಜೊತೆ ವಾಗ್ವಾದ ನಡೆಸಿದ ಬಳಿಕ ಹಲ್ಲೆ ನಡೆಸುತ್ತಿರುವುದು ವೀಡಿಯೊದಲ್ಲಿ ಸೆರೆಯಾಗಿದೆ. ಪಾದ್ರಿಯು ವೃದ್ಧನ ಮೇಲೆ ಹಲ್ಲೆ ನಡೆಸಿ, ಕುತ್ತಿಗೆ ಪಟ್ಟಿ ಹಿಡಿದು ಎಳೆದೊಯ್ದು ತೀವ್ರ ಹಲ್ಲೆ ನಡೆಸಿದ್ದಾರೆ. ಈ ವೇಳೆ ಪತಿಯ ರಕ್ಷಣೆಗೆ ಮುಂದಾದ ಮಹಿಳೆಗೆ ಪಾದ್ರಿ ಒದೆಯುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಸೆರೆಯಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!