ಕಡಬ: ಮೂವರು ಯುವತಿಯರ ಮೇಲೆ ಆ್ಯಸಿಡ್ ಎರಚಿದ ಅಪರಿಚಿತ.!!
ಮುಸುಕುಧಾರಿ ಯುವಕನಿಂದ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

ಕಡಬ : ವಿದ್ಯಾರ್ಥಿನಿಯರ ಮೇಲೆ ಕಾಲೇಜು ಆವರಣದಲ್ಲಿ ಅಪರಿಚಿತ ವ್ಯಕ್ತಿಯೋರ್ವ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. 

ದಾಳಿಗೊಳಗಾದ ವಿದ್ಯಾರ್ಥಿನಿಯರನ್ನು ಅಲಿನ ಸಿಬಿ, ಅರ್ಚನಾ, ಅಮೃತ ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆರೋಪಿ ಯುವಕ ಮುಸುಕಧಾರಿಯಾಗಿದ್ದು, ತಕ್ಷಣ ಎಚ್ಚೆತ್ತ ಕಾಲೇಜು ವಿದ್ಯಾರ್ಥಿಗಳು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

ಕಡಬ ಸರಕಾರಿ ಕಾಲೇಜಿನ ಆವರಣದಲ್ಲಿ ಪರೀಕ್ಷಾ ತಯಾರಿ ನಡೆಸುತ್ತಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಕಿಡಿಗೇಡಿಯೊಬ್ಬ ಆ್ಯಸಿಡ್ ದಾಳಿ ನಡೆಸಿದ್ದಾನೆ. ಆರೋಪಿ ಕೇರಳ ಮೂಲದವ ಎಂಬುದಾಗಿ ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ. ಆರೋಪಿ ಮಾಸ್ಕ್, ಹ್ಯಾಟ್ ಹಾಕಿಕೊಂಡು ಬಂದು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾನೆ. ಸದ್ಯ ಗಾಯಗೊಂಡ ವಿದ್ಯಾರ್ಥಿನಿಯರಿಗೆ ಕಡಬ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗುತ್ತಿದೆ.

ಆರೋಪಿ ಅರೆಸ್ಟ್ - ಪ್ರೇಮ ವೈಫಲ್ಯ.!? 

 

ಬಂಧಿತ ಯುವಕನನ್ನು ಕೇರಳ ಮೂಲದ ಅಬೀನ್ (23) ಎನ್ನಲಾಗಿದೆ. ಆರೋಪಿ ಮತ್ತು ಆ್ಯಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿ ಒಂದೇ ಕೋಮಿಗೆ ಸೇರಿದವರಾಗಿರುತ್ತಾರೆ.ಪ್ರಾಥಮಿಕ ತನಿಖೆಯಲ್ಲಿ ಪ್ರೇಮ ವೈಫಲ್ಯದ ಹಿನ್ನಲೆಯಲ್ಲಿ ಆರೋಪಿ ಈ ಕೃತ್ಯ ನಡೆಸಿರುವುದಾಗಿ ತಿಳಿದುಬಂದಿದೆ.  ತನ್ನ ಪ್ರೇಯಸಿಯ ಮೇಲೆ ಆ್ಯಸಿಡ್ ಎರಚಲು ಬಮದಿದ್ದು. ಘಟನೆಯ ವೇಳೆ ವಿದ್ಯಾರ್ಥಿನಿಯ ಪಕ್ಕದಲ್ಲಿದ್ದ ಇಬ್ಬರು ವಿದ್ಯಾರ್ಥಿನಿಯರಿಗೂ ಆ್ಯಸಿಡ್ ತಗುಲಿ ಸಣ್ಣ ಪ್ರಮಾಣದ ಗಾಯಗಳಾಗಿರುತ್ತದೆ ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!