ಕಾಂಗ್ರೆಸ್‌ ಕಾರ್ಯಕರ್ತನ ಭೀಕರ ಹತ್ಯೆ ಮಾಡಿ ಮರಕ್ಕೆ ನೇತುಹಾಕಿದ ದುಷ್ಕರ್ಮಿಗಳು.!!
ಮರಕ್ಕೆ ಕಟ್ಟಿ ಹಾಕಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ

ಚಿತ್ರಹಿಂಸೆ ನೀಡಿ ವ್ಯಕ್ತಿಯ ಭೀಕರ ಹತ್ಯೆ ಮಾಡಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ರೋಣ ವಿಧಾನಸಭಾ ಕ್ಷೇತ್ರದ ಡಂಬಳ ಹೋಬಳಿಯ ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಹೊತ್ತಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬನ ಭೀಕರ ಕೊಲೆಯಾಗಿದೆ.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ಜಮೀನೊಂದರಲ್ಲಿ ಮರಕ್ಕೆ ನೇತು ಹಾಕಿದ ಸ್ಥಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಶವ ನೇತಾಡುತ್ತಿದೆ. ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಪ್ರಮುಖ ಕಾರ್ಯಕರ್ತ ಡೋಣಿ ಗ್ರಾಮದ ಶರಣಪ್ಪ ಸಂದಿಗೌಡ್ರ ಕೊಲೆಗೀಡಾದ ವ್ಯಕ್ತಿ.

ಕೊಲೆಗೂ ಮುನ್ನ ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ಮಾಡಿರುವ ದುಷ್ಕರ್ಮಿಗಳು, ಕಣ್ಣಿಗೆ ಕಾರದಪುಡಿ ಎಸೆದು ಹಲ್ಲೆ ಮಾಡಿದ್ದಾರೆ. ನಂತರ ಶವ ತೂಗು ಹಾಕಿ ವಿಕೃತಿ ಮೆರೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇಂದು ಬೆಳ್ಳಂಬೆಳಿಗ್ಗೆ ಮರದಲ್ಲಿ ನೇತಾಡುತ್ತಿರುವ ಶವ ನೋಡಿದ ಸ್ಥಳೀಯರು ಬೆಚ್ಚಿ ಬಿದ್ದಿದ್ದು, ಇಂದು ಡಂಬಳದಲ್ಲಿ ಕಾಂಗ್ರೆಸ್ ಪಕ್ಷದಿಂದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಹೀಗಾಗಿ ಕಾರ್ಯಕರ್ತರಲ್ಲಿ ಆತಂಕ ಮೂಡಿದೆ.

ಯಾವ ಕಾರಣಕ್ಕಾಗಿ ಈ ಕೊಲೆ ನಡೆದಿದೆ ಎಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ. ಘಟನೆಯ ಸುದ್ದಿ ತಿಳಿದ ಮುಂಡರಗಿ ಠಾಣೆಯ ಇನ್ಸ್‌ಪೆಕ್ಟರ್ ಮಂಜುನಾಥ್ ಕುಸುಗಲ್ಲ‌ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಲೆ ಯಾವ ಕಾರಣಕ್ಕಾಗಿ ನಡೆದಿರಬಹುದು ಎಂದು ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೊಲೆ ಮಾಡಿದ ಆರೋಪಿಗಳ ಪತ್ತೆಗೆ ಜಾಲ ಬೀಸಿರುವ ಮುಂಡರಗಿ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!