ಉಡುಪಿ: ವೀಡಿಯೊ ಚಿತ್ರೀಕರಣ ಪ್ರಕರಣ - ಸಿಓಡಿಯಿಂದ ಚಾರ್ಜ್‌ಶೀಟ್ ಸಲ್ಲಿಕೆ
ಪ್ಯಾರಾಮೆಡಿಕಲ್‌ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣ
ಸಿಓಡಿಯಿಂದ ಚಾರ್ಜ್‌ಶೀಟ್‌ ಸಲ್ಲಿಕೆ

ಉಡುಪಿ: ಉಡುಪಿಯ ನೇತ್ರಜ್ಯೋತಿ ಪ್ಯಾರಾಮೆಡಿಕಲ್‌ ಕಾಲೇಜಿನಲ್ಲಿ ನಡೆದಿದ್ದ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ದೋಷಾರೋಪಣಾ ಪಟ್ಟಿಯನ್ನು ಸಿಓಡಿ ಪೊಲೀಸರು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಪ್ರಕರಣದ ತನಿಖೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಿಓಡಿ ಡಿವೈಎಸ್ಪಿ ಅಂಜು ಮಾಲಾ ಎರಡು ಸಂಪುಟಗಳಲ್ಲಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಧೀಶೆ ದೀಪಾ ಅವರಿಗೆ ಸಲ್ಲಿಕೆ ಮಾಡಿದರು.

2023 ಜುಲೈ 18ರಂದು ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶೌಚಾಲಯಕ್ಕೆ ಹೋದ ಅದೇ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳ ವಿಡಿಯೋ ಚಿತ್ರೀಕರಣ ಮಾಡಿರುವುದಾಗಿ ಆರೋಪಿಸಲಾಗಿತ್ತು. ಈ ಪ್ರಕರಣ ರಾಜ್ಯಾದ್ಯಂತ ಸಾಕಷ್ಟು ಚರ್ಚೆಗೆ ಕಾರಣವಾಗಿ ವಿವಾದ ಸೃಷ್ಟಿಸಿತ್ತು. ಈ ಕುರಿತು ಮಲ್ಪೆ ಪೊಲೀಸರು ವಾರದ ಬಳಿಕ ಸ್ವಯಂ ಪ್ರೇರಿತರಾಗಿ ಮೂವರು ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದರು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!