ಸುಳ್ಯ: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ಆರೋಪಿ ಪಾರಾರಿ
ಸುಳ್ಯ: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ಆರೋಪಿ ಪಾರಾರಿ

ಸುಳ್ಯ: ಯುವಕನೋರ್ವ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ನಾಪತ್ತೆಯಾದ ಘಟನೆ ಸುಳ್ಯದ ಗಾಂಧಿನಗರ ಎಂಬಲ್ಲಿ ನಡೆದಿದೆ. ಈ ಪ್ರದೇಶದ ಬಾಡಿಗೆ ಮನೆಯೊಂದರಲ್ಲಿ ವಾಸ ಮಾಡುತ್ತಿದ್ದ ಉತ್ತರ ಕರ್ನಾಟಕ ಮೂಲದ ಕಾರ್ಮಿಕ ಕುಟುಂಬದ ಬಾಲಕಿಗೆ ಅದೇ ಭಾಗದ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಆಕೆಯ ಮನೆಗೆ ತೆರಳಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.

ಬಳಿಕ ಈ ವಿ‍ಷಯ ಮನೆಯವರಿಗೆ ತಿಳಿಯುತ್ತಿದ್ದಂತೆ ಯುವಕ ನಾಪತ್ತೆಯಾಗಿದ್ದಾನೆ. ಇನ್ನು ಈ ಬಗ್ಗೆ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!