ಮುಸ್ಲಿಂ ಮಹಿಳೆ ಜೊತೆ ಅನೈತಿಕ ಸಂಬಂಧ ಆರೋಪ; ವ್ಯಕ್ತಿಗೆ ಮರಣಾಂತಿಕ ಹಲ್ಲೆ.!
ಅನೈತಿಕ ಸಂಬಂಧ ಆರೋಪ - ಸಾಮಾಜಿಕ ಕಾರ್ಯಕರ್ತನಿಗೆ ಹಿಗ್ಗಾಮುಗ್ಗಾ ಥಳಿತ

ಮುಸ್ಲಿಂ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆಂದು ಆರೋಪಿಸಿ ವ್ಯಕ್ತಿಯೊಬ್ಬನಿಗೆ ಅನ್ಯಕೋಮಿನವರು ಮರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ರಸ್ತೆಯಲ್ಲಿ ನಡೆದಿದೆ.

ಸಾಮಾಜಿಕ ಕಾರ್ಯಕರ್ತ ಬಿಎಚ್‌ ಗೌಡ, ಹಲ್ಲೆಗೊಳಗಾಗಿರುವ ವ್ಯಕ್ತಿ. 

ಮುಸ್ಲಿಂ ಮಹಿಳೆಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದನೆಂದು ಆರೋಪಿಸಲಾಗಿದೆ. ಇದು ಮಹಿಳೆಯ ಕುಟುಂಬಸ್ಥರಿಗೆ ತಿಳಿದು ಬಿಎಚ್‌ ಗೌಡರ ಕಾರು ಅಡ್ಡಗಟ್ಟಿ ಹೊರಗೆಳೆದಿದ್ದಾರೆ. ಇಬ್ಬರು ವ್ಯಕ್ತಿಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಲಾಗಿದೆ. ಹಿಗ್ಗಾಮುಗ್ಗ ಥಳಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೇಸ್.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!