ಔಷಧ ತಯಾರಿಕಾ ಘಟಕದಲ್ಲಿ ರಿಯಾಕ್ಟರ್ ಸ್ಫೋಟಕ್ಕೆ ಐವರು ಸ್ಥಳದಲ್ಲೇ ಸಾವು
ಔಷಧ ತಯಾರಿಕಾ ಘಟಕ ಸ್ಪೋಟ
ಐವರು ಮೃತ್ಯು - ಹಲವರಿಗೆ ಗಾಯ

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಔಷಧ ತಯಾರಿಕಾ ಘಟಕದಲ್ಲಿ ರಿಯಾಕ್ಟರ್ ಸ್ಫೋಟಗೊಂಡ ಪರಿಣಾಮ ಐವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಇನ್ನೂ ಹಲವರು ಘಟಕದಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಸ್ಫೋಟದ ವೇಳೆ ಕಟ್ಟಡದಲ್ಲಿ ಸುಮಾರು 50 ಮಂದಿ ಇದ್ದರು ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳದ ವೀಡಿಯೊಗಳು ಲಭ್ಯವಾಗಿದ್ದು ಸ್ಪೋಟದ ಪ್ರಮಾಣ ಎಷ್ಟಿರಬಹುದೆಂದು ಊಹಿಸಬಹುದಾಗಿದೆ. 

ಔಷಧ ಕಂಪನಿಯಲ್ಲಿನ ರಿಯಾಕ್ಟರ್‌ನಲ್ಲಿ ಸ್ಫೋಟ ಸಂಭವಿಸಿದೆ ಮತ್ತು ಸ್ಫೋಟದ ಪ್ರಭಾವದಿಂದಾಗಿ ಅಲ್ಲೇ ಆಸುಪಾಸಿನಲ್ಲಿ ಕೆಲಸ ಮಾಡುತ್ತಿದ್ದವರು ಕುಸಿದುಬಿದ್ದಿದ್ದಾರೆ. 7 ಮಂದಿ ಸಾವನ್ನಪ್ಪಿರುವ ಕುರಿತು ವರದಿಯಾಗಿದೆ. 30 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು. ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುತ್ತಮುತ್ತಲಿನ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲು ಅಧಿಕಾರಿಗಳು ಪ್ರಾರಂಭಿಸಿದ್ದಾರೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ತೀವ್ರತೆಯಿಂದಾಗಿ ಅಕ್ಕಪಕ್ಕದ ಕಟ್ಟಡಗಳಿಗೂ ಹಾನಿಯಾಗಿದೆ. ಮೃತರಲ್ಲಿ ಬಿಹಾರ ನಾಲ್ವರು ಕಾರ್ಮಿಕರೂ ಇದ್ದಾರೆ. ರಿಯಾಕ್ಟರ್ ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ.

\


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!