ಪಡುಬಿದ್ರಿ: ಹೆದ್ದಾರಿಗೆ ಬಸ್ ಅಡ್ಡ ನಿಲ್ಲಿಸಿ ಬಸ್ ಸ್ಟ್ಯಾಂಡ್ ನಲ್ಲಿ ಕುಳಿತ ಡ್ರೈವರ್.!!
ಟೈಮಿಂಗ್ ಕುರಿತಾಗಿ ವಾಗ್ವಾದ: ಬಸ್ಸನ್ನು ಹೆದ್ದಾರಿಗೆ ಅಡ್ಡವಾಗಿ ನಿಲ್ಲಿಸಿದ ಚಾಲಕ

ಪಡುಬಿದ್ರಿ : ಖಾಸಗಿ ಬಸ್ ಟೈಮಿಂಗ್ ವಿಚಾರವಾಗಿ ಗಲಾಟೆ ನಡೆಯುತ್ತಲೇ ಇರುತ್ತದೆ. ಆದರೆ ಈ ಬಾರಿ ರಸ್ತೆ ಬದಿ ನಡೆಯಬೇಕಾದ ಗಲಾಟೆ, ಬದಲಾಗಿ ರಸ್ತೆಯ ಮಧ್ಯದಲ್ಲೆ ನಡೆದಿದ್ದು, ಖಾಸಗಿ ಬಸ್ ಡ್ರೈವರ್ ಬಸ್ ನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ಸೀದ ಹೋಗಿ ಬಸ್ ಸ್ಟ್ಯಾಂಡ್ ನಲ್ಲಿ ಕುಳಿತ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಟೈಂ ಕೀಪರ್ ಶರತ್ ಹಾಗೂ ಉಡುಪಿ - ಮಂಗಳೂರು ನಡುವೆ ಸಂಚರಿಸುವ ಖಾಸಗಿ ಬಸ್ ಚಾಲಕ ಅಜೀಜ್ ಮಧ್ಯೆ ಟೈಮಿಂಗ್ ಕುರಿತಾಗಿ ನಡೆದಿದ್ದ ವಾಗ್ವಾದ ಮುಂದುವರಿದು ಪಡುಬಿದ್ರಿ ತಲುಪಿದ ಸರ್ವಿಸ್ ಬಸ್ ಎಂಎಂಎಸ್‌ಗೆ ಟೈಂ ಕೀಪರ್ ಶರತ್ ಅಡ್ಡ ನಿಂತಾಗ ಕುಪಿತಗೊಂಡ ಚಾಲಕ ಅಜೀಜ್ ತನ್ನ ಮಾಲಕರಿಗೆ ಕರೆ ಮಾಡಿ, ಬಳಿಕ ಬಸ್ಸನ್ನೇ ಹೆದ್ದಾರಿ ಅಡ್ಡವಾಗಿ ನಿಲ್ಲಿಸಿ ಬಸ್ ತಂಗುದಾಣದಲ್ಲಿ ವಿಶ್ರಾಂತಿ ಪಡೆದಿದ್ದಾನೆ.

ಸುಮಾರು 5 ನಿಮಿಷಗಳ ಕಾಲ ನಡೆದಿದ್ದ ಈ ಪ್ರಹಸನದಲ್ಲಿ ಪಡುಬಿದ್ರಿ ಪೊಲೀಸರ ಮಧ್ಯಪ್ರವೇಶದವರೆಗೂ ಉಡುಪಿ – ಮಂಗಳೂರು ಏಕಮುಖ ರಸ್ತೆಯಲ್ಲಿ ಹೆದ್ದಾರಿ ವಾಹನ ಸಂಚಾರಕ್ಕೆ ತೊಡಕಾಗಿತ್ತು. ಇದೇ ಸಂದರ್ಭದಲ್ಲಿ ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರು ಮತ್ತು ಇತರ ವಾಹನ ಸವಾರರು ಚಾಲಕನ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರುಗಳು ದಾಖಲಾಗಿವೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!