ಮೂಡುಬಿದಿರೆ: ಕೊನೆಗೂ "ಕಾಮುಕ ಶಿಕ್ಷಕ ಗುರುವ"ನ ಬಂಧನ.!!
ವಿದ್ಯಾರ್ಥಿನಿಯರಿಗೆ ಕಿರುಕುಳ ಪ್ರಕರಣ: ಆರೋಪಿ ಶಿಕ್ಷಕನ ಬಂಧನ

ಮೂಡುಬಿದಿರೆ : ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೊ ಪ್ರಕರಣ ಎದುರಿಸುತ್ತಾ ತಲೆಮರೆಸಿಕೊಂಡಿದ್ದ ಕಲ್ಲಮುಂಡ್ಕೂರು ಸರಕಾರಿ ಶಾಲೆಯ ಸಹ ಶಿಕ್ಷಕ ಗುರುವ ಮೊಗೇರನನ್ನು ಪೊಲೀಸರು ಬಂಧಿಸಿದ್ದಾರೆ. 

ಆರೋಪಿ ಗುರುವ ಸುಮಾರು 20 ವರ್ಷಗಳಿಂದ ಈ ಶಾಲೆಯಲ್ಲಿ ಶಿಕ್ಷಕನಾಗಿದ್ದ. ಶಾಲೆಯಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಈತನ ವಿರುದ್ಧ ಮಾ.14ರಂದು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣವನ್ನು ನಗರದ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು. ಈ ಮಧ್ಯೆ ಆರೋಪಿಯು ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ. ಆದರೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. 

ಸದ್ಯ ಆರೋಪಿಯನ್ನು ಮೂಡುಬಿದಿರೆ ಪೊಲೀಸರು, ಮಹಿಳಾ ಠಾಣೆಯ ಪೊಲೀಸರು ಮತ್ತು ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ. ಪ್ರತಿಭಟನೆಗೆ ಸಿದ್ಧರಾಗಿದ್ದ ಸ್ಥಳೀಯರು ಆರೋಪಿ ಶಿಕ್ಷಕ ಗುರುವ ಮೊಗೇರ ಕಳೆದ ಫೆಬ್ರವರಿ 28ರಂದು ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬಹಿರಂಗಗೊಳ್ಳುತ್ತಿದ್ದಂತೆ ಈತನ ಕೃತ್ಯಗಳು ಬೆಳಕಿಗೆ ಬಂದಿದ್ದವು.

ಈ ಸಂಬಂಧ ಮಾ.13ರಂದು ಶಾಲೆಯ ಮುಖ್ಯ ಶಿಕ್ಷಕರು ಆರೋಪಿ ಶಿಕ್ಷಕನ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರಂತೆ ಮಾ.14ರಂದು ಗುರುವ ಮೊಗೇರನ ವಿರುದ್ಧ ಪ್ತಕರಣ ದಾಖಲಿಸಿಕೊಂಡಿದ್ದ ಪೊಲೀಸರು ಪ್ರಕರಣವನ್ನು ನಗರದ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದರು. ಆದರೆ ಪ್ರಕರಣ ದಾಖಲಾದ ಬಳಿಕವೂ ಆರೋಪಿಯ ಬಂಧನಕ್ಕೆ ಪೊಲೀಸರು ಆಸಕ್ತಿ ತೋರುತ್ತಿಲ್ಲ ಎಂಬ ಆರೋಪ ಸ್ಥಳೀಯವಾಗಿ ಕೇಳಿಬಂದಿತ್ತು. ಪೊಲೀಸರ ನಿರ್ಲಕ್ಷ್ಯ ಖಂಡಿಸಿ ಸ್ಥಳೀಯರು ಪ್ರತಿಭಟನೆಗೆ ಮುಂದಾಗಿದ್ದರು. ಈ ನಡುವೆ ಆರೋಪಿಯ ಬಂಧನಕ್ಕೆ ಮೂಡುಬಿದಿರೆ ಪೊಲೀಸರು ಮತ್ತು ಮಹಿಳಾ ಠಾಣೆಯ ಪೊಲೀಸರನ್ನೊಳಗೊಂಡ ಎರಡು ತಂಡಗಳನ್ನು ರಚಿಸಲಾಗಿತ್ತು. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!