"ಜೈ ಶ್ರೀರಾಮ್ " ಎಂದ ಹಿಂದೂ ಯುವಕರ ಮೇಲೆ "ಮುಸ್ಲಿಮರಿಂದ ಹಲ್ಲೆ".!
ಜೈ ಶ್ರೀರಾಮ್‌ ಘೋಷಣೆ ಕೂಗಿದ್ದಕ್ಕೆ ಹಲ್ಲೆ- ನಾಲ್ವರು ಆರೋಪಿಗಳು ಅರೆಸ್ಟ್‌

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಶ್ರೀರಾಮ ನವಮಿಯನ್ನು ಮುಗಿಸಿ ಕಾರಿನಲ್ಲಿ ಜೈಶ್ರೀರಾಮ್ ಘೋಷಣೆ ಕೂಗಿಕೊಂಡು ಹೋಗುತ್ತಿದ್ದ ಮೂವರು ಹಿಂದೂ ಯುವಕರ ಕಾರನ್ನು ಅಡ್ಡಗಟ್ಟಿದ ಮುಸ್ಲಿಂ ಯುವಕರ ಗುಂಪೊಂದು ಇಲ್ಲಿ ಶ್ರೀರಾಮ್ ಎನ್ನಂಗಿಲ್ಲ, ಓನ್ಲಿ ಅಲ್ಲಾ.. ಅಲ್ಲಾ ಹು ಅಕ್ಬರ್ ಎನ್ನಬೇಕು ಎಂದು ಹಲ್ಲೆ ಮಾಡಿದ ಘಟನೆ ನಡೆದಿದೆ.

ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಮೂವರು ಹಿಂದೂ ಯುವಕರ ಮೇಲೆ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಚಿಕ್ಕಬೆಟ್ಟಹಳ್ಳಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ. ಮೂವರು ಬಾಲಕರು ಕಾರಿನಲ್ಲಿ ಹೋಗುತ್ತಿದ್ದಾಗ ಜೈ ಶ್ರೀರಾಮ್ ಎಂದು ಕೂಗಿದ್ದಾರೆ. ಈ ವೇಳೆ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕರು ಕಾರನ್ನು ಅವರನ್ನು ತಡೆದು ನಿಲ್ಲಿಸಿ ಗಲಾಟೆ ಆರಂಭಿಸಿದ್ದಾರೆ. ಈ ವೇಳೆ ಕಾರಿನ ಬಳಿ ಬಂದು ಯುವಕರು ಏನು ನೀವು ಜೈ ಶ್ರೀರಾಮ್ ಎಂದು ಹೇಳಬೇಕಾ? ಇಲ್ಲಿ ಜೈ ಶ್ರೀ ರಾಮ್ ಇಲ್ಲಾ... ಒನ್ಲೀ ಅಲ್ಲಾ... ಅಲ್ಲಾ ಹು  ಅಕ್ಬರ್  ಎಂದು ಹೇಳಬೇಕು ಎಂದು ಅವ್ಯಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ.

ಆಗ ಕಾರಿನಲ್ಲಿ ಕುಳಿತಿದ್ದ ಹಿಂದೂ ಯುವಕರು ನಮ್ಮ ಹಬ್ಬ ನಾವು ಏನಾದ್ರೂ ಮಾಡ್ಕೋತೀವಿ. ನಾವು ನಿಮ್ಮ ಹಬ್ಬದಲ್ಲಿ ಹೀಗೆ ಮಾಡ್ತಿವಾ? ನಿಮ್ಮ ಹಬ್ಬದಲ್ಲಿ ಬಂದು ನಾವು ಹೀಗೆ ಮಾಡ್ತೀವಾ? ಎಂದು ಪ್ರಶ್ನೆ ಮಾಡಿದ್ದಾರೆ. ಇದಾದ ನಂತರ ಅವ್ಯಾಚ್ಯ ಶಬ್ದಗಳ ನಿಂದನೆ ಹೆಚ್ಚಾಗಿದೆ. ಈ ವೇಳೆ ಮುಸ್ಲಿಂ ಯುವಕರು ಕಾರಿನಲ್ಲಿದ್ದವರ ಮೇಲೆ ಹಲ್ಲೆ ಮಾಡಲು ಮುಂದಾದಾಗ, ಇವರೂ ಕೂಡ ಕಾರಿನಿಂದ ಇಳಿದು ಹೊರಗೆ ಬಂದು ಮಾರಾಮಾರಿ ಹೊಡೆದಾಡಿಕೊಂಡಿದ್ದಾರೆ. ಇನ್ನು ಬೈಕ್‌ನಲ್ಲಿದ್ದ ಮುಸ್ಲಿಂ ಇಬ್ಬರು ಮುಸ್ಲಿಂ ಯುವಕರ ಜೊತೆಗೆ ಅಲ್ಲಿಯೇ ಇದ್ದ ಮತ್ತಿಬ್ಬರು ಮುಸ್ಲಿಂ ಯುವಕರು ಸೇರಿ ಕಾರಿನಲ್ಲಿ ಬಂದಿದ್ದವರ ಮೇಲೆ ತೀವ್ರ ಹಲ್ಲೆ ಮಾಡಿದ್ದಾರೆ. ಈ ಘಟನೆ ನಂತರ ಕಾರಿನಲ್ಲಿದ್ದ ಯುವಕರು ವಿದ್ಯಾರಣ್ಯ ಪುರ ಪೊಲೀಸ್ ಠಾಣೆಗೆ ಬಂದು ದೂರು ದಾಖಲು ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮಿಪ್ರಸಾದ್, ಘಟನೆಗೆ ಸಂಬಂಧಪಟ್ಟಂತೆ ನಾಲ್ವರನ್ನು ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯಗಳ ಪರಿಶೀಲನೆ ಕೂಡ ಮಾಡಲಾಗಿದೆ. ಘಟನೆಯಲ್ಲಿ ನಾಲ್ವರು ಭಾಗಿಯಾಗಿರುವುದು ಗೊತ್ತಾಗಿದೆ. ನಾಲ್ವರಲ್ಲಿ ಇಬ್ಬರು ಅಪ್ರಾಪ್ತರಿದ್ದಾರೆ. ಪ್ರಮುಖ ಆರೋಪಿ ಫರ್ಮಾನ್, ಸಮೀರ್ ಎಂದು ತಿಳಿಸಿದ್ದಾರೆ. ತನಿಖೆ ಮುಂದುವರೆದಿದೆ. ಮತ್ತೆ ಯಾರಾದರೂ ಭಾಗಿಯಾಗಿದ್ದಾರಾ ಎಂದು ಪರಿಶೀಲಿಸಲಾಗುತ್ತಿದೆ. ಆರೋಪಿಗಳು ಹೋಗುತ್ತಿರಬೇಕಾದರೆ ಕಾರನ್ನ ಗಮನಿಸಿದ್ದಾರೆ. ಕಾರಲ್ಲಿ ಬಾವುಟ ಹಿಡಿದು ಹೋಗ್ತಿರೋದು ನೋಡಿ ವಾಪಸ್‌ ಬಂದಿದ್ದಾರೆ. ಕಾರನ್ನು ಅಡ್ಡ ಹಾಕಿ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ. ವಿದ್ಯಾರಣ್ಯಪುರ ಪೊಲೀಸರಿಂದ ವಿಚಾರಣೆ ನಡೆಸಲಾಗುತ್ತಿದೆ. ಗಾಂಜಾ ನಶೆಯಲ್ಲಿ ಕಾರು ಅಡ್ಡ ಹಾಕಿ ಗಲಾಟೆ ಮಾಡಿರುವ ಶಂಕೆ ವ್ಯಕ್ತವಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!