ಪುತ್ತೂರು: ವ್ಯಕ್ತಿ ನಾಪತ್ತೆ  - ದೂರು ದಾಖಲು.!
ದಿವಾಕರ ನಾಪತ್ತೆ - ದೂರು ದಾಖಲು

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು  ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿಯೊಬ್ಬರು ನಾಪತ್ತೆಯಾದ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆರೆಮೂಲೆ ದಿ.ಸಂಖಪ್ಪ ಪೂಜಾರಿ ಅವರ ಪುತ್ರ ದಿವಾಕರ (38) ನಾಪತ್ತೆಯಾದ ವ್ಯಕ್ತಿಯಾಗಿದ್ದಾರೆ. 

ಅರಿಯಡ್ಕ ಗ್ರಾಮದ ಕೆರೆಮೂಲೆಯವರಾದ ದಿವಾಕರ ಅಡುಗೆ ಕೆಲಸಕ್ಕೆ ಸಹಾಯಕರಾಗಿ ಹೋಗುತ್ತಿದ್ದು, ಏ.27 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ದಿವಾಕರ ಅವರ ಮೊಬೈಲ್‌ ಸ್ವಿಚ್ ಆಫ್ ಆಗಿದೆ ಎಂದು ಅವರ ಚಿಕ್ಕಪ್ಪ ಸೀತಾರಾಮ ಪೂಜಾರಿಯವರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!