ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ಅಮಾನತು - ಕೋರ್‌ಕಮಿಟಿ ಸಭೆಯಲ್ಲಿನಿರ್ಧಾರ!
ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ಅಮಾನತು - ಕೋರ್‌ಕಮಿಟಿ ಸಭೆಯಲ್ಲಿನಿರ್ಧಾರ!

ಹುಬ್ಬಳ್ಳಿ : ಅಶ್ಲೀಲ ವಿಡಿಯೋಗಳ ಸರಣಿ ದೇಶಾದ್ಯಂತ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ (Prajwal Revanna) ಅವರನ್ನು ಜೆಡಿಎಸ್‌ (JDS) ಪಕ್ಷದಿಂದ ಅಮಾನತುಗೊಳಿಸಲು ತೀರ್ಮಾನಿಸಲಾಗಿದೆ. ಮಂಗಳವಾರ ನಡೆದ ಕೋರ್‌ ಕಮಿಟಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಪ್ರಜ್ವಲ್‌ ರೇವಣ್ಣ ಅವರಿಗೆ ಶೋಕಾಸ್‌ ನೋಟಿಸ್‌ ಕಳಿಸುವುದಾಗಿ ಎಚ್‌.ಡಿ.

ಕುಮಾರಸ್ವಾಮಿ (H D Kumaraswamy) ಹೇಳಿದ್ದಾರೆ.

ತನಿಖೆಯನ್ನು ಎಸ್‌ಐಟಿ ತನಿಖೆಗೆ ರಾಜ್ಯ ಸರ್ಕಾರವು ವಹಿಸಿದ ಕೂಡಲೇ ಪ್ರಜ್ವಲ್‌ ರೇವಣ್ಣ ದೇಶದಿಂದ ತಲೆ ತಪ್ಪಿಸಿಕೊಂಡು ಫ್ರಾಂಕ್‌ಫರ್ಟ್‌ ಗೆ ಪರಾರಿಯಾಗಿದ್ದರು.

ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯರಿಗೆ ಅಭಯ ನೀಡಿರುವ ಎಚ್‌ಡಿ ಕುಮಾರಸ್ವಾಮಿ, ಯಾರೂ ಸಹ ಈ ಬಗ್ಗೆ ಭಯ ಪಡಬೇಕಾಗಿಲ್ಲ. ತಪ್ಪಿತಸ್ಥರಿಗೆ ಶಿಕ್ಷಯಾಗಲಿದೆ ಎಂದು ಹೇಳಿದ್ದಾರೆ. ನಾನು ಮತ್ತು ದೇವೇಗೌಡರು ಸಂತ್ರಸ್ತ ಮಹಿಳೆಯರ ಬೆಂಬಲಕ್ಕೆ ನಿಲ್ಲುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದು, ನಮ್ಮ ಕುಟುಂಬವನ್ನು ಟಾರ್ಗೆಟ್‌ ಮಾಡಿಕೊಂಡು ಈ ಎಲ್ಲಾ ರಾಜಕೀಯ ಕುತಂತ್ರ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!