ಉಪ್ಪಿನಂಗಡಿ: ಮಗು ಸಹಿತ ಮಹಿಳೆ ನಾಪತ್ತೆ - ಪ್ರಕರಣ ದಾಖಲು.!
ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

ಉಪ್ಪಿನಂಗಡಿ: ಕೌಕ್ರಾಡಿ ಗ್ರಾಮದ ಕಟ್ಟೆ ಮಜಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ಮೂಲದ ಸೋನು ಸೋಂಕರ್ ಎಂಬವರ ಪತ್ನಿ ರೀಮಾ ಸೋಂಕರ್ (26) ಮತ್ತು ಮಗು ರಿಯಾ (1) ಎಂಬಿಬ್ಬರು ನಾಪತ್ತೆಯಾಗಿ ರುವ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇಂಟಿರಿಯರ್ ಡೆಕೊರೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸೋನು ಸೋಂಕರ್ ಉತ್ತರ ಪ್ರದೇಶದ ಅಜಾಮ್ ಘರ್ ಜಿಲ್ಲೆಯ ಅಮಹಾಮಾಫಿ ಗ್ರಾಮದ ನಿವಾಸಿಯಾಗಿದ್ದು, ಕೌಕ್ರಾಡಿಯಲ್ಲಿ ಕೃಷ್ಣಪ್ಪ ಎಂಬವರ ಬಾಡಿಗೆ ಮನೆಯಲ್ಲಿ ಕುಟುಂಬ ದೊಂದಿಗೆ ವಾಸವಿದ್ದರು.

ಸೋನು ಸೋಂಕರ್ ಎ.22 ಬೆಳಗ್ಗೆ ಕೆಲಸಕ್ಕೆಂದು ಹೋಗಿದ್ದು ವಾಪಸ್ಸು ಸಂಜೆ 7.30 ಗಂಟೆಗೆ ಮನೆಗೆ ಬಂದಾಗ ಮನೆಯ ಬಾಗಿಲಿಗೆ ಬೀಗ ಹಾಕಲಾಗಿತ್ತು. ಬಾಗಿಲು ತೆರೆದು ಒಳ ಪ್ರವೇಶಿಸಿದಾಗ ಮನೆಯಲ್ಲಿ ಪತ್ನಿ ರೀಮಾ ಸೋಂಕರ್ ಮತ್ತು 1 ವರ್ಷ ಪ್ರಾಯದ ಮಗು ರಿಯಾ ಮನೆಯಲ್ಲಿ ಇಲ್ಲದೇ ಆಕೆ ಉಪಯೋಗಿಸುತ್ತಿದ್ದ ಮೊಬೈಲ್ ಫೋನ್ ನೆಲದಲ್ಲಿ ಬಿದ್ದುಕೊಂಡಿತ್ತು. 

ಮನೆ ಮಾಲೀಕರು ಹಾಗೂ ಅಕ್ಕಪಕ್ಕದ ಮನೆಯವರಲ್ಲಿ ರೀಮಾಳ ಬಗ್ಗೆ ವಿಚಾರಿಸಿ ದಾಗ ಅವಳು ಬೆಳಿಗ್ಗೆ 10 ಗಂಟೆಗೆ ಮನೆಗೆ ಬೀಗ ಹಾಕಿ ಮಗುವಿನೊಂದಿಗೆ ಹೋಗುವುದನ್ನು ಕಂಡಿರುವುದಾಗಿ ತಿಳಿಸಿದ್ದು ನಂತರ ಎಲ್ಲಾ ಕಡೆ ಹುಡುಕಿದರು ಎಲ್ಲಿಯೂ ಪತ್ತೆಯಾಗದೇ ಇರುವುದರಿಂದ ವಿಳಂಬಿಸಿ ಪೊಲೀಸರಿಗೆ ದೂರು ನೀಡಲಾಗಿದೆ. ನಾಪತ್ತೆಯಾಗಿರುವ ತಾಯಿ ಮಗುವಿನ ಬಗ್ಗೆ ಯಾರಿಗಾರದರೂ ಸುಳಿವು ಸಿಕ್ಕಲ್ಲಿ ಉಪ್ಪಿನಂಗಡಿ ಠಾಣೆಗೆ ಮಾಹಿತಿ ನೀಡಬೇಕಾಗಿ ವಿನಂತಿಸಲಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!