ಮಂಗಳೂರು: ಎಂಡಿಎಂಎ ಮಾರಾಟ - ಇಬ್ಬರು ಡ್ರಗ್ ಪೆಡ್ಲರ್ ಅರೆಸ್ಟ್.!
ಸಿಸಿಬಿ ಪೊಲೀಸರ ಕಾರ್ಯಾಚರಣೆ - ಇಬ್ಬರ ಬಂಧನ

ಮಂಗಳೂರು : ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟಕ್ಕೆ ಯತ್ನಿಸಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ಅರೆಸ್ಟ್ ಮಾಡಲಾಗಿದೆ.

ಬಂಧಿತರನ್ನು ಮೊಹಮ್ಮದ್ ಇಶಾನ್ (35), ಜಾಫರ್ ಸಾಧಿಕ್ (35) ಎಂದು ಗುರುತಿಸಲಾಗಿದೆ.

ಆರೋಪಿಗಳು ದಿನಾಂಕ 01-05-2024 ರಂದು ಮಂಗಳೂರು ನಗರದ ಕೋಟೆಕಾರ್ ಬೀರಿ ಬಳಿಯ ಮನೆಯೊಂದರಲ್ಲಿ ಇಬ್ಬರು ವ್ಯಕ್ತಿಗಳು ಸೇರಿಕೊಂಡು ಬೃಹತ್ ಪ್ರಮಾಣದಲ್ಲಿ ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿತರನ್ನು ದಸ್ತಗಿರಿ ಮಾಡಿರುತ್ತಾರೆ.

ಆರೋಪಿತರು ಬೆಂಗಳೂರಿನಿಂದ ಮಾದಕ ವಸ್ತುವನ್ನು ಖರೀದಿಸಿ ತಂದು ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡಿ ಹಣ ಸಂಪಾದನೆ ಮಾಡಲು ಪ್ರಯತ್ನಿಸುತ್ತಿದ್ದರು. ಆರೋಪಿತರಿಂದ 9,00,000/- ರೂ ಮೌಲ್ಯದ 407 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಗಳು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಂಡಿರುತ್ತಾರೆ.

ಆರೋಪಿತರಲ್ಲಿ ಜಾಫರ್ ಸಾದಿಕ್ ಎಂಬಾತನ ಮೇಲೆ ಈ ಹಿಂದೆ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ, ಹಲ್ಲೆ ಹಾಗೂ ಕೊಲೆಯತ್ನ ಹಾಗೂ ಕೊಡಗು ಜಿಲ್ಲೆಯ ಕುಶಾಲ ನಗರ ಠಾಣೆಯಲ್ಲಿ ದರೋಡೆ ಪ್ರಕರಣಗಳು ಸೇರಿದಂತೆ ಒಟ್ಟು 09 ಪ್ರಕರಣಗಳು ದಾಖಲಾಗಿರುತ್ತವೆ. ಮೊಹಮ್ಮದ್ ಇಶಾನ್ ಎಂಬಾತನ ಮೇಲೆ ಈ ಹಿಂದೆ ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣೆಯಲ್ಲಿ MDMA ಮಾರಾಟ ಪ್ರಕರಣ ದಾಖಲಾಗಿರುತ್ತದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!