ಮತ್ತೊಂದು ಲವ್ ಜಿಹಾದ್ ಕೇಸ್? ಅಪ್ರಾಪ್ತ ಬಾಲಕಿಯನ್ನು ರ‍್ಭಿಣಿ ಮಾಡಿದ ಅನ್ಯಕೋಮಿನ ಯುವಕ!
ಸದ್ದಾಂ ಹುಸೇನ್​ ಎಡಗಾಲಿಗೆ ಗುಂಡು ಹಾರಿಸಿ ಬಂಧನ
ಅಧಿಕಾರಿಗಳ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ, ಪರಾರಿಯಾಗಲು ಯತ್ನ
ಪ್ರೀತಿಸುವಂತೆ ನಂಬಿಸಿ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ

 

ಹುಬ್ಬಳ್ಳಿಯ ಹಿಂದೂ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸದ್ದಾಂ ಹುಸೇನ್​ ಪೊಲೀಸರ  ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದನು. ಈ ವೇಳೆ ಪೊಲೀಸರು ಆರೋಪಿ ಸದ್ದಾಂ ಹುಸೇನ್​ ಎಡಗಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಆರೋಪಿ ಸದ್ದಾಂ ಹುಸೇನ್​ ಹಲ್ಲೆ ಮಾಡಿದ್ದರಿಂದ ವಿದ್ಯಾಗಿರಿ ಪೊಲೀಸ್​ ಠಾಣೆಯ ಇನ್ಸ್​​​ಪೆಕ್ಟರ್ ಸಂಗಮೇಶ ಹಾಗೂ ಕಾನ್ಸ್‌ಟೇಬಲ್ ಅರುಣ್​ ಅವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಸದ್ದಾಂ ಹುಸೇನ್​ನನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ನವನಗರ ಪೊಲೀಸ್​ ಠಾಣೆಯಲ್ಲಿ ತನ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ, ಆರೋಪಿ ಸದ್ದಾಂ ಹುಸೇನ್​ ಪರಾರಿಯಾಗಿದ್ದನು. ಪೊಲೀಸರು ಕಾರ್ಯಾಚರಣೆ ಆರೋಪಿಯನ್ನು ಧಾರವಾಡದ ವಿದ್ಯಾಗಿರಿ ಪೊಲೀಸ್​ ಠಾಣೆ ವ್ಯಪ್ತಿಯಲ್ಲಿ ಸೆರೆ ಹಿಡಿದಿದ್ದಾರೆ. ಬಳಿಕ ಆರೋಪಿ ಸದ್ದಾಂ ಹುಸೇನ್​ ಪೊಲೀಸ್​ ವಾಹನ ಹತ್ತುವಾಗ ಅಧಿಕಾರಿಗಳ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ, ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೆ ವಿದ್ಯಾಗಿರಿ ಪೊಲೀಸ್​ ಠಾಣೆಯ ಇನ್ಸ್​​​ಪೆಕ್ಟರ್ ಸಂಗಮೇಶ ಆರೋಪಿಯ ಎಡಗಾಲಿಗೆ ಗುಂಡು ಹಾರಿಸಿದ್ದಾರೆ.

ಗರ್ಭಿಣಿಯಾದ ಬಾಲಕಿ

ಆರೋಪಿ ಸದ್ದಾಂ ಹುಸೇನ್ ಲಿಂಬುವಾಲೆ ಹುಬ್ಬಳ್ಳಿಯ ಈಶ್ವರನಗರದವನು ಎಂದು ಗುರುತಿಸಲಾಗಿದೆ. ಅಪ್ರಾಪ್ತ ಜತೆ ಸಲುಗೆ ಬೆಳೆಸಿ, ಪ್ರೀತಿಸುವಂತೆ ನಂಬಿಸಿ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಮನೆಯಲ್ಲಿ ಹೇಳಿದರೆ, ಜೀವಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾನೆ. ಕಳೆದ ಮೂರ್ನಾಲ್ಕು ದಿನದಿಂದ ಬಾಲಕಿ ವಾಂತಿ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಕಿಮ್ಸ್‌ಗೆ ದಾಖಲಿಸಿದ್ದರು.

ಆದರೂ ವಾಂತಿ ಕಡಿಮೆಯಾಗದಿದ್ದಾಗ ವೈದ್ಯರು ಪರೀಕ್ಷೆಗೆ ಒಳಪಡಿಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಆ ವೇಳೆ ಬಾಲಕಿ ವಿಚಾರಿಸಿದಾಗ ಸದ್ದಾಂ ಹುಸೇನ್ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ತಿಳಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಬಾಲಕಿ ಪೋಷಕರು ದೂರು ದಾಖಲಿಸಿದ್ದಾರೆ.

ಆರೋಪಿ ಸದ್ದಾಂ ಹುಸೇನ್​ ವಿರುದ್ಧ ಐಪಿಸಿ 376, 506, ಜಾತಿ ನಿಂದನೆ ಮತ್ತು ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯನ್ನು ಚಿಕಿತ್ಸೆಗಾಗಿ ಇಲ್ಲಿನ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಶುಕ್ರವಾರ ಸಂಜೆ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದವು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!