ಉಳ್ಳಾಲ: ಹೆದ್ದಾರಿ ದಾಟುತ್ತಿದ್ದಾಗ ಕಾರು ಢಿಕ್ಕಿ ಹೊಡೆದು ಬಿಜೆಪಿ ಕಾರ್ಯಕರ್ತ ಮೃತ್ಯು
ಉಳ್ಳಾಲ: ಹೆದ್ದಾರಿ ದಾಟುತ್ತಿದ್ದಾಗ ಕಾರು ಢಿಕ್ಕಿ ಹೊಡೆದು ಬಿಜೆಪಿ ಕಾರ್ಯಕರ್ತ ಮೃತ್ಯು

ಉಳ್ಳಾಲ: ಹೆದ್ದಾರಿ ದಾಟುತ್ತಿದ್ದಾಗ ಕಾರು ಢಿಕ್ಕಿ ಹೊಡೆದು ಬಿಜೆಪಿ ಕಾರ್ಯಕರ್ತರೊಬ್ಬರು ಸಾವನ್ನಪ್ಪಿದ ಘಟನೆ ಉಳ್ಳಾಲ ರಾಷ್ಟ್ರೀಯ ಹೆದ್ದಾರಿ 66ರ ಕೋಟೆಕಾರು ಅಡ್ಕ ಸಮೀಪ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.  ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನಿವಾಸಿ ಶ್ರೀಕಾಂತ್‌ (46) ಮೃತ ದುರ್ದೈವಿ. 

ಆಟೋ ಎಲೆಕ್ಟ್ರೀಷಿಯನ್‌ ಕೆಲಸ ನಡೆಸುತ್ತಿದ್ದ ಶ್ರೀಕಾಂತ್‌ ಅವರು ಹೆದ್ದಾರಿ ದಾಟುತ್ತಿದ್ದರು. ಈ ವೇಳೆ ಕೇರಳದಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಶ್ರೀಕಾಂತ್‌ ಅವರು ಗಂಭೀರ ಗಾಯಗೊಂಡಿದ್ದು, ಅವರನ್ನು ಅಪಘಾತ ಮಾಡಿದ ಕಾರು ಚಾಲಕನೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ.

ಆದರೆ ಶ್ರೀಕಾಂತ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಶ್ರೀಕಾಂತ್ ತುಳುನಾಡು ಫ್ರೆಂಡ್ಸ್ ಕೋಟೆಕಾರುವಿನ ಸಕ್ರಿಯ ಸದಸ್ಯರಾಗಿದ್ದು, ಬಿಜೆಪಿ ಕಾರ್ಯಕರ್ತರಾಗಿದ್ದರು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!