ಪುತ್ತೂರು; ಬಸ್  ಬೈಕ್‌ ನಡುವೆ ಭೀಕರ ಅಪಘಾತ! ಸವಾರ ಸ್ಥಳದಲ್ಲೇ ಮೃತ್ಯು.
ಪುತ್ತೂರು; ಬಸ್ ಬೈಕ್‌ ನಡುವೆ ಭೀಕರ ಅಪಘಾತ! ಸವಾರ ಸ್ಥಳದಲ್ಲೇ ಮೃತ್ಯು.

ಪುತ್ತೂರು: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ. ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ಪುರುಷರಕಟ್ಟೆ ಎಂಬಲ್ಲಿ ಘಟನೆ ನಡೆದಿದೆ. 

ಮಾಹಿತಿಗಳ ಪ್ರಕಾರ, ಪುರುಷರಕಟ್ಟೆಯಲ್ಲಿರುವ ಬಿಂದು ಪ್ಯಾಕ್ಟರಿಯಲ್ಲಿ ಸಿಪಾನ್ ಮೆಷಿನ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಯುವಕ ಮೃತಪಟ್ಟ ದುರ್ದೈವಿ. ಈತನನ್ನು ವಿಟ್ಲ ಕುಂಡಡ್ಕ ನಿವಾಸಿ ಮೋಕ್ಷಿತ್ ಎಂದು ಗುರುತಿಸಲಾಗಿದೆ. ಮೋಕ್ಷಿತ್ ಎಂದಿನAತೆ ಕೆಲಸಕ್ಕೆ ತೆರಳುವಾಗ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸದ್ಯ ಹೆಚ್ಚಿನ ಮಾಹಿತಿ ಪೊಲೀಸ್ ವಿಚಾರಣೆ ನಂತರವಷ್ಟೇ ತಿಳಿದು ಬರಬೇಕಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!