ಸೂರಜ್ ರೇವಣ್ಣನಿಂದ ಅಸಹಜ ಲೈಂಗಿಕ ದೌರ್ಜನ್ಯ.!!!
ಪ್ರಜ್ವಲ್ ರೇವಣ್ಣ ಬೆನ್ನಲ್ಲೇ ಅಣ್ಣ ಸೂರಜ್ ನಿಂದ ಜೆಡಿಎಸ್ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಆರೋಪ

ಹಾಸನ: ಹಲವು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಪಾಲಾಗಿರುವ ಬೆನ್ನಲ್ಲೇ ಮಾಜಿ ಸಚಿವ ಹಾಲಿ ಶಾಸಕ ಎಚ್ಡಿ ರೇವಣ್ಣ ಕುಟುಂಬದ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ.

ಪ್ರಜ್ವಲ್ ರೇವಣ್ಣ ಅವರ ಅಣ್ಣ, ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ವಿರುದ್ಧವೂ ಸಹ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಅರಕಲಗೂಡು ಜೆಡಿಎಸ್ ಕಾರ್ಯಕರ್ತನ ಮೇಲೆ ಸೂರಜ್ ರೇವಣ್ಣ ಅವರು ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ವಿಲಕ್ಷಣ ಆರೋಪದಿಂದ ರೇವಣ್ಣ ಕುಟುಂಬ ಮತ್ತೆ ಮುಜುಗರಕ್ಕೀಡಾದಂತಾಗಿದೆ.

ಸೂರಜ್ ರೇವಣ್ಣ ಅವರು ಜೂನ್ 16ರ ರಾತ್ರಿ ತಮ್ಮ ಪಕ್ಷದ ಕಾರ್ಯಕರ್ತನಿಗೆ ಸಹಾಯ ಮಾಡುವುದಾಗಿ ಚನ್ನಪಟ್ಟಣ ತಾಲ್ಲೂಕಿನ ಗನ್ನಿಕಡದ ತೋಟದ ಮನೆಗೆ ಕರೆಯಿಸಿಕೊಂಡು ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಜೆಡಿಎಸ್ ಕಾರ್ಯಕರ್ತ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ ಪರಮೇಶ್ವರ, ಡಿಜಿ ಮತ್ತು ಐಜಿಪಿ ಹಾಗೂ ಹಾಸನ ಎಸ್ಪಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!