ಮಣಿಪಾಲ: ಗಾಂಜಾ ಸೇವನೆ - ಐವರು ವಿದ್ಯಾರ್ಥಿಗಳು ವಶಕ್ಕೆ
ಮಣಿಪಾಲ: ಗಾಂಜಾ ಸೇವನೆ - ಐವರು ವಿದ್ಯಾರ್ಥಿಗಳು ವಶಕ್ಕೆ
ಗಾಂಜಾ ಸೇವನೆ - ಐವರು ವಿದ್ಯಾರ್ಥಿಗಳು ವಶಕ್ಕೆ

ಉಡುಪಿ: ಮಣಿಪಾಲದ ಅಪಾರ್ಟ್ಮೆಂಟ್ ವೊಂದರ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪದ ಮೇಲೆ ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

ವಶಕ್ಕೆ ಪಡೆದಿರುವ ವಿದ್ಯಾರ್ಥಿಗಳನ್ನು ನಿಖಿಲ್ ಎಂ. (22), ತನ್ವೀರ್ ರೆಡ್ಡಿ (25), ಶರಣ್ ಶೆಟ್ಟಿ (22), ರಾಹುಲ್ ಸೀಮಾ (21), ತುಶಾರ್ ಜಿ. (21) ಎಂದು ಗುರುತಿಸಲಾಗಿದೆ.

ಇನ್ನು ಮಣಿಪಾಲ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ನವೀನ್ ನಾಯ್ಕ ಅವರು ರೌಂಡ್ಸ್ ಕರ್ತವ್ಯದಲ್ಲಿರುವಾಗ ವಿದ್ಯಾರ್ಥಿಗಳು ಗಾಂಜಾವನ್ನು ಸೇವಿಸಿರುವ ಸಂದೇಹದ ಮೇಲೆ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗಾಗಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಲಾಗಿದ್ದು, ಆಗ ವಿದ್ಯಾರ್ಥಿಗಳು ಗಾಂಜಾ ಸೇವಿಸಿರುವುದು ಧೃಡಪಟ್ಟಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಎನ್‌‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Comments

https://newsdaksha.online/assets/images/user-avatar-s.jpg

0 comment

Write the first comment for this!