ಮಂಗಳೂರು: 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಮಂಗಳೂರು: 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ಸುಮಾರು 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಮಾರ್ಚ್ 23 ರಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ತುಂಬೆ ವ್ಯಾಪ್ತಿಯ ತಲಪಾಡಿ ನಿವಾಸಿ ಅಬ್ದುಲ್ ಅಜೀಜ್ ಅಲಿಯಾಸ್ ಅಜೀಜ್ (45) ಎಂದು ಗುರುತಿಸಲಾಗಿದೆ.

ಈತ ಕೇರಳ ಮತ್ತು ಕರ್ನಾಟಕದ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಅಜೀಜ್ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ನಾಲ್ಕು, ಉಳ್ಳಾಲದಲ್ಲಿ ಮೂರು, ಬಂಟ್ವಾಳದಲ್ಲಿ ಒಂದು ಮತ್ತು ಹಾಸನದ ಅರೇಹಳ್ಳಿ ಮತ್ತು ಕೇರಳ ರಾಜ್ಯದ ಕುಟ್ಯಾಡಿಯಲ್ಲಿ ತಲಾ ಒಂದು ಪ್ರಕರಣಗಳಿವೆ.

ನಗರ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅವರ ಆದೇಶದಂತೆ ಎಸಿಪಿ ಧನ್ಯ ಎಸ್ ನಾಯಕ್ ಅವರ ಮಾರ್ಗದರ್ಶನದಲ್ಲಿಕೊಣಾಜೆ ಇನ್ಸ್ ಪೆಕ್ಟರ್ ಕೀರ್ತಿಕುಮಾರ್, ಪಿಎಸ್ ಐ ಅಶೋಕ್, ಸಿಬ್ಬಂದಿಗಳಾದ ಶಿವಕುಮಾರ್ ಮತ್ತು ಪುರುಷೋತ್ತಮ್ ಆರೋಪಿಯನ್ನು ಬಂಧಿಸಿದ್ದಾರೆ.

Comments

https://newsdaksha.online/assets/images/user-avatar-s.jpg

0 comment

Write the first comment for this!