ಕಾರ್ಕಳ: ನಿಷೇಧಿತ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ - ಇಬ್ಬರ ವಿರುದ್ಧ ದೂರು ದಾಖಲು
ಕಾರ್ಕಳ: ನಿಷೇಧಿತ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ - ಇಬ್ಬರ ವಿರುದ್ಧ ದೂರು ದಾಖಲು
ಅನಧಿಕೃತ ಕಟ್ಟಡ ನಿರ್ಮಾಣ: ಪ್ರಕರಣ ದಾಖಲು

ಕಾರ್ಕಳ: ನಿಷೇಧಿತ ಪುರಾತತ್ವ ಇಲಾಖೆಯ ಜಮೀನಿನಲ್ಲಿ ನಿಯಮಗಳನ್ನು ಉಲ್ಲಂಘಿಸಿ ಅನಧಿಕೃತ ಕಟ್ಟಡ ನಿರ್ಮಿಸುತ್ತಿರು ಆರೋಪದ ಮೇಲೆ ಇಬ್ಬರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾರ್ಕಳದಲ್ಲಿ ಪುರಾತತ್ವ ಇಲಾಖೆ ಕಿರಿಯ ಸಂರಕ್ಷಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿಕೊಂಡಿರುವ ಗೋಕುಲ್ ಪ್ರವೀಣ್ ಅವರು ಈ ಬಗ್ಗೆ ದೂರು ದಾಖಲಿಸಿದ್ದಾರೆ.

 ಅಪಾದಿತರಾದ ಶೈಲ ಎನ್ ಪೈ ಹಾಗೂ ಎಸ್ ನಿತ್ಯಾನಂದ ಪೈ ಇವರಿಗೆ ಕಾರ್ಕಳ ಕಸಬಾ ಗ್ರಾಮದ ಅನಂತಶಯನ ಅನಂತಪದ್ಮನಾಭ ದೇವಸ್ಥಾನದ ಬಳಿ ನ.ನಂ 86/24 ರಲ್ಲಿ 0.1 ಎಕ್ರೆ ಹಾಗೂ ಸ.ನಂ 86/6o1 ರಲ್ಲಿ 0.86 ಎಕ್ರೆ ನಿಷೇಧಿತ ಪುರಾತತ್ವ ಇಲಾಖೆ ಭಾರತ, ಬೆಂಗಳೂರು ವಲಯ ರವರಿಂದ ನಿಷೇಧಿತ ಪ್ರದೇಶದಲ್ಲಿರುವ ಸಂಗೀತ ಶಾಲಾ ಕಟ್ಟಡದ ದುರಸ್ತಿಗೆ ಮಾತ್ರ ಅನುಮತಿ ನೀಡಲಾಗಿತ್ತು. 

ಆದರೆ ಇವರು ನಿರಾಕ್ಷೇಪಣಾ ಪತ್ರದ ಷರತ್ತುಗಳನ್ನು ಉಲ್ಲಂಘಿಸಿ ನಿಷೇಧಿತ ಪ್ರದೇಶದಲ್ಲಿ ಹೊಸದಾಗಿ ಕಟ್ಟಡ ಕಾಮಗಾರಿಯನ್ನು ಮಾಡಿರುತ್ತಾರೆ. ಈ ಬಗ್ಗೆ ಸ್ಥಳ ಪರಿಶೀಲಿಸಿ ಹೊಸದಾಗಿ ಕಟ್ಟಡ ನಿರ್ಮಾಣ ಮಾಡದಂತೆ ನೋಟೀಸನ್ನು ನೀಡಿದರೂ ನಿಯಮ ಉಲ್ಲಂಘಿಸಿ ನಿಷೇಧಿತ ಪುರಾತತ್ವ ಇಲಾಖೆಯ ಜಮೀನಿನಲ್ಲಿ ಅನಧಿಕೃತ ಕಟ್ಟಡ ನಿರ್ಮಿಸುತ್ತಿರುವುದು ನಿನ್ನೆ ಬೆಳಿಗ್ಗೆ ಗಮನಕ್ಕೆ ಬಂದಿರುವುದಾಗಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಪುರಾತತ್ವ ಇಲಾಖೆಯ ನಿಯಮಾವಳಿಗಳನ್ನು ಗಾಳಿಗೆ ತೂರಿ ಸ್ಥಳೀಯ ಪುರಸಭೆಯ ಅನುಮತಿಯನ್ನು ಪಡೆಯದೇ ಏಕಾಎಕಿ ಅನಧಿಕೃತ ಕಟ್ಟಡ ಕಾಮಗಾರಿ ಆರಂಭಿಸಿದ್ದರು. ಈ ಕಾಮಗಾರಿಯನ್ನು ಸ್ಥಗಿತಗೊಳಿಸಿ ಮಾಲಕರ ವಿರುದ್ಧ ಕ್ರಮಜರುಗಿಸಬೇಕೆಂದು ಪುರಸಭೆ ಸಾಮಾನ್ಯ ಸಭೆಯಲ್ಲಿ ಪುರಸಭಾ ಸದಸ್ಯ ಸೋಮನಾಥ ನಾಯ್ಕ ಒತ್ತಾಯಿಸಿದ್ದರು ಹಾಗೂ ಕಟ್ಟಡ ಕಾಮಗಾರಿ ನಡೆಯುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸದ ಹಿನ್ನಲೆಯಲ್ಲಿ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಈ ಪ್ರಕರಣವನ್ನು ಪುರಾತತ್ವ ಇಲಾಖೆ ಗಂಭೀರವಾಗಿ ಪರಿಗಣಿಸಿ ನಿಷೇಧಿತ ವಲಯದಲ್ಲಿ ಕಾಮಗಾರಿ ಸ್ಥಗಿತಗೊಳಿಸುವಂತೆ ಮಾಲಕರಿಗೆ ಹಲವು ಬಾರಿ ನೋಟೀಸ್ ನೀಡಿದ್ದರಿಂದ ಸ್ವಲ್ಪ ಸಮಯ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸಿದ್ದರು.

Comments

https://newsdaksha.online/assets/images/user-avatar-s.jpg

0 comment

Write the first comment for this!