ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಬಿಡುಗಡೆ - ಪ್ರಬಲ ನಾಯಕರ ಹೆಸರು.??
ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಬಿಡುಗಡೆ

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ನಡೆಸಿರುವ ಕಾಂಗ್ರೆಸ್ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಪ್ರಕಟಿಸಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರದಿಂದ ಟಿಕೆಟ್ ಅಂತಿಮಗೊಳಿಸಿದ್ದು, ಉಳಿದಂತ ಕನಕಪುರ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಧಾನಸಭೆ ವಿಪಕ್ಷ ಉಪ ನಾಯಕ ಯು.ಟಿ ಖಾದರ್ ಮಂಗಳೂರು ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಬಂಟ್ವಾಳದಿಂದ ಬಿ.ರಮಾನಾಥ ರೈ, ಮೂಡಬಿದ್ರೆ ಕ್ಷೇತ್ರದಿಂದ ಮಿಥುನ್ ರೈ, ಬೆಳ್ತಂಗಡಿ ಕ್ಷೇತ್ರದಿಂದ ರಕ್ಷಿತ್ ಶಿವರಾಂ ಹೆಸರಿದೆ.

ಇನ್ನು ನಂಜನಗೂಡು ಕ್ಷೇತ್ರದಿಂದ ದ್ರವನಾರಾಯಣ ಪುತ್ರ ದರ್ಶನ್ ದ್ರವನಾರಾಯಣ ಹಾಗೂ ರಾಜಾಜಿನಗರ ಕ್ಷೇತ್ರದಿಂದ ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಎಂ ಎಲ್ ಸಿ ಪುಟ್ಟಣ್ಣಗೆ ಟಿಕೆಟ್ ಘೋಷಿಸಲಾಗಿದೆ.

ಮೊದಲ ಹಂತದ ಪಟ್ಟಿ..


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!