ಸಿಎಂ ಕುರ್ಚಿ ಫೈಟ್: ಯಾರಾಗ್ತಾರೆ ಮುಖ್ಯಮಂತ್ರಿ.!?
ಕರುನಾಡಿನ ಚಿತ್ತ ದೆಹಲಿಯತ್ತ!

ಕಾಂಗ್ರೆಸ್ ಕರ್ನಾಟಕ ಕುರುಕ್ಷೇತ್ರ ಗೆದ್ದಾಗಿದೆ. ಪ್ರಚಂಡ ಬಹುಮತ ಪಡೆದಿರುವ ಕಾಂಗ್ರೆಸ್‌ನಲ್ಲಿ ಇದೀಗ ಸಿಎಂ ಕುರ್ಚಿ ಫೈಟ್ ತೀವ್ರಗೊಂಡಿದೆ. ಕೆಪಿಸಿಸಿ ಸಾರಥಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿಗಾಗಿ ಪಟ್ಟು ಹಿಡಿದಿದ್ದಾರೆ. ಚುನಾವಣೆಗೂ ಮುನ್ನ ಒಗ್ಗಟ್ಟಿನ ಮಂತ್ರ ಜಪಿಸಿದ ಈ ಉಭಯ ನಾಯಕರು ಇದೀಗ ಸಿಎಂ ಕುರ್ಚಿಗೆ ಪಟ್ಟು ಬಿಗಿಗೊಳಿಸಿದ್ದಾರೆ. ಪಕ್ಷವು ಭಾರಿ ಬಹುಮತ ಪಡೆಯಲು ತಮ್ಮ ಕೊಡುಗೆಯನ್ನು ಮುಂದಿಟ್ಟುಕೊಂಡು ಉಭಯ ನಾಯಕರು ತಾವೇ ಮುಖ್ಯಮಂತ್ರಿಯಾಗಬೇಕು ಎಂಬ ಹಟಕ್ಕೆ ಬಿದ್ದಿದ್ದಾರೆ. ಹೀಗಾಗಿ ಇದು ನಾಡಿನ ಮುಂದಿನ ದೊರೆಯ ಆಯ್ಕೆಯನ್ನು ಕಗ್ಗಂಟು ಮಾಡಿದೆ.

ಡಿಕೆ ಶಿವಕುಮಾರ್ ಪಟ್ಟು? ಸಿದ್ದರಾಮಯ್ಯ ವಾದವೇನು?

ಈ ಬಾರಿ ಇಡೀ ಒಕ್ಕಲಿಗ ಸಮುದಾಯ ನನ್ನ ಬೆನ್ನಿಗೆ ನಿಂತಿದೆ ಅನ್ನೋದು ಡಿಕೆ ವಾದ.. ಹಳೇ ಮೈಸೂರು ಭಾಗದಲ್ಲಿ ಹೆಚ್ಚಿನ ಸ್ಥಾನಗಳು ಬಂದಿವೆ.. ಶೇಕಡಾ 5ರಷ್ಟು ಒಕ್ಕಲಿಗರ ಹೆಚ್ಚುವರಿ ವೋಟು ಕಾಂಗ್ರೆಸ್‌ಗೆ ಬಂದಿದೆ. ಒಕ್ಕಲಿಗರು ಸಿಎಂ ಆಗುವ ಅವಕಾಶ ಇರುವುದಕ್ಕೆ ಹೆಚ್ಚುವರಿ ಮತ ಬಂದಿದೆ. ಹೀಗಾಗಿ ನನಗೇ ಸಿಎಂ ಸ್ಥಾನ ಕೊಡಬೇಕು ಎಂದು ಡಿಕೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಮೊದಲು ಶಾಸಕರ ಅಭಿಪ್ರಾಯ ಸಂಗ್ರಹವಾಗಲಿ.. ಶಾಸಕರು ಯಾರ ಪರ ನಿಲ್ಲುತ್ತಾರೋ ಅವರಿಗೆ ಸಿಎಂ ಸ್ಥಾನ ನೀಡಬೇಕು. ಹೈಕಮಾಂಡ್ ತೀರ್ಮಾನಕ್ಕೆ ಬಂದಲು ಶಾಸಕರು ತೀರ್ಮಾನಿಸಲು ಅನ್ನೋದು ಸಿದ್ದು ವಾದ. ಸಿದ್ದರಾಮಯ್ಯ ಈ ಹಿಂದೆ ಕೂಡ ಮುಂದಿನ ಮುಖ್ಯಮಂತ್ರಿಯನ್ನು ಪಕ್ಷದ ಶಾಸಕರು ಮತ್ತು ಹೈಕಮಾಂಡ್ ತೀರ್ಮಾನಿಸುತ್ತಾರೆ ಎಂದಿದ್ರು. ಇದೀಗ ಡಿಕೆ ಕೂಡ ಮುಂದಿನ ಸಿಎಂ ಯಾರು ಅನ್ನೋದನ್ನು ಶಾಸಕಾಂಗ ಪಕ್ಷದ ಸಭೆ ಮತ್ತು ವರಿಷ್ಠರು ತೀರ್ಮಾನ ಮಾಡ್ತಾರೆ ಎಂದಿದ್ದಾರೆ.

ಸಿಎಂ ಯಾರು ಆಗಬೇಕೆಂದು ಶಾಸಕ ಅಭಿಪ್ರಾಯ ಸಂಗ್ರಹಿಸಲಾಗಿದ್ದು, ಇಬ್ಬರು ನಾಯಕರ ನಡುವಿನ ತೀವ್ರ ಪೈಪೋಟಿಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗದಂತೆ ನೋಡಿಕೊಳ್ಳಬೇಕಿದೆ. ಹೀಗಾಗಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ನ ಎದುರು ಬದುರು ಕೂರಿಸಿಕೊಂಡು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮಾತುಕತೆ ಮೂಲಕ ಅಂತಿಮ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ. ಸದ್ಯಕ್ಕೆ ಎಲ್ಲರ ಚಿತ್ತ ದೆಹಲಿಯತ್ತ ನೆಟ್ಟಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!