'ಸಿದ್ದುಗೆ ಸಿಎಂ ಪಟ್ಟ' - ಕರಗಿದ ಡಿಕೆಶಿ ಕನಸು
ಮೇ.20ರಂದು ಪದಗ್ರಹಣ

ಒಟ್ಟಾರೆ ಕಳೆದ 5 ದಿನಗಳಿಂದ ನಡೆಯುತ್ತಿದ್ದ ಸಿಎಂ ಆಯ್ಕೆ ಕಸರತ್ತಿಗೆ ತೆರೆಬಿದ್ದಿದ್ದು ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿಯಾಗಿ ಮತ್ತು ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಆಯ್ಕೆ ಆಗಿದ್ದು ಮೇ.20ರಂದು 12.30ಕ್ಕೆ ಪದಗ್ರಹಣ ಸಮಾರಂಭ ನಡೆಯಲಿದೆ. ಇದರ ಅಧಿಕೃತ ಪ್ರಕಟಣೆ ಇಂದು ಸಂಜೆ ನಡೆಯಲಿರುವ ಸಿಎಲ್ ಪಿ ಸಭೆಯಲ್ಲಿ ನಡೆಯಲಿದೆ

ಬುಧವಾರ ನಡುರಾತ್ರಿ ನಡೆದ ಅಂತಿಮ ಬೆಳವಣಿಗೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಸರ್ವಾನುಮತದ ನಿರ್ಣಯವನ್ನು ದೆಹಲಿಯಲ್ಲಿ ಪ್ರಕಟಿಸಿದ್ದಾರೆ.

ಇಂದು ಸಂಜೆ 7 ಗಂಟೆಗೆ ಶಾಸಕಾಂಗ ಸಭೆ ಕರೆಯಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬೆಂಗಳೂರಿನ ಕ್ವೀನ್ಸ್‌ರಸ್ತೆಯ ಇಂದಿರಾಭವನದಲ್ಲಿ ಈ ಸಭೆ ಕರೆದಿದ್ದುಈ ಸಿಎಲ್ ಪಿ ಸಭೆಯಲ್ಲೇ ನಾಯಕರ ಹೆಸರು ಕೂಡ ಅಧಿಕೃತವಾಗಿ ಘೋಷಣೆಯಾಗಲಿದೆ.ವಿಧಾನಸಭೆ ಸದಸ್ಯರುಗಳು, ಪರಿಷತ್ ಸದಸ್ಯರುಗಳು ಹಾಗೂ ಸಂಸದರನ್ನು ಒಳಗೊಂಡ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆಯೋಜಿಸಲಾಗಿದೆ.

ತಮಗೇ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಗಿಪಟ್ಟು ಹಿಡಿದಿದ್ದರು. ಪಕ್ಷ ಸಂಕಷ್ಟದ ಸಮಯದಲ್ಲಿ ಪಕ್ಷದ ಸಾರಥ್ಯ ವಹಿಸಿಕೊಂಡು ಪಕ್ಷವನ್ನು ಸಂಘಟಿಸಿ ಅಧಿಕಾರಕ್ಕೆ ತಂದ ತಮಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಿದ್ದರು.

ಕೊನೆಗೂ ಡಿ.ಕೆ. ಶಿವಕುಮಾರ್ ಅವರ ಮನವೊಲಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿದ್ದು, ಅವರು ಉಪಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!