ವಿಧಾನಸಭೆಯ ಕಲಾಪ ಆರಂಭ - ನೂತನ ಶಾಸಕರ ಪ್ರಮಾಣವಚನ ಸ್ವೀಕಾರ
ವಿಧಾನಸಭೆಯ ಕಲಾಪ ಆರಂಭ - ನೂತನ ಶಾಸಕರ ಪ್ರಮಾಣವಚನ ಸ್ವೀಕಾರ

16ನೇ ವಿಧಾನಸಭೆಯ ಮೊದಲ ಅಧಿವೇಶನದ ಮೊದಲ ದಿನದ ಕಲಾಪ ಆರಂಭವಾಗಿದ್ದು ಹಂಗಾಮಿ ಸ್ಪೀಕರ್ ಆಗಿ ಆರ್.ವಿ.ದೇಶಪಾಂಡೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಪ್ರಮಾಣವಚನ ಬೋಧಿಸಿದ್ದಾರೆ.

ಇದಾದ ಬಳಿಕ ನೂತನ ಶಾಸಕರಿಂದ ಪ್ರಮಾಣವಚನ ಸ್ವೀಕಾರ ಪ್ರಕ್ರಿಯೆ ಆರಂಭವಾಗಿದೆ. ಮೊದಲಿಗೆ ಶಾಸಕರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಗವಂತನ ಹೆಸರಿನಲ್ಲಿ ಹಾಗೂ ಕನಕಪುರ ಕ್ಷೇತ್ರದ ಶಾಸಕರಾಗಿ ಡಿ.ಕೆ.ಶಿವಕುಮಾರ್ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸಚಿವರಾಗಿರುವ ಡಾ.ಜಿ.ಪರಮೇಶ್ವರ್, K.H​.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಪ್ರಿಯಾಂಕ್ ಖರ್ಗೆ ಸತೀಶ್​ ಜಾರಕಿಹೊಳಿ, ರಾಮಲಿಂಗಾರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದರು. ಇವರಲ್ಲದೇ ಯು.ಟಿ.ಖಾದರ್​, ಶಿವಾನಂದ ಪಾಟೀಲ್ ಕೂಡಾ ಪ್ರಮಾಣವಚನ ಸ್ವೀಕರಿಸಿದ್ದಾರೆ.

 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!