ಮಂಗಳೂರು: ಜೂಜಾಟಗಾರರ ಜತೆ ಶಾಮೀಲು : ವಾಸುದೇವ ಚೌಹಾಣ್ ಅಮಾನತು
ಸ್ಪೆಷಲ್ ಬ್ರಾಂಚ್ ಕಾನ್ಸ್ಟೇಬಲ್ ಅಮಾನತು

ಉಳ್ಳಾಲ: ಉಳ್ಳಾಲ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅಮಾನತು ಮಾಡಿದ್ದಾರೆ.

ಇತ್ತೀಚೆಗೆ ತಲಪಾಡಿ ಗಡಿಭಾಗದಲ್ಲಿ ಜೂಜಾಟ ನಡೆಸುತ್ತಿದ್ದ ತಂಡವನ್ನು ಎಸಿಪಿ ನೇತೃತ್ವದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಆದರೆ ಈ ಬಗ್ಗೆ ಉಳ್ಳಾಲ ಎಸ್ ಬಿ ಆಗಿದ್ದ ವಾಸುದೇವ್ ಗೆ ಮಾಹಿತಿಗಳಿದ್ದವು. ಅಲ್ಲದೆ, ಆರೋಪಿಗಳ ಜೊತೆ ವಾಸುದೇವ ಶಾಮೀಲಾಗಿದ್ದ ಎನ್ನುವ ಆರೋಪಗಳಿದ್ದವು.

ಈ ಬಗ್ಗೆ ಖಚಿತ ಮಾಹಿತಿಗಳನ್ನು ಹೊಂದಿದ್ದ ಎಸಿಪಿ ಧನ್ಯಾ ನಾಯಕ್ ತಲಪಾಡಿ ಗಡಿಭಾಗದ ತಚ್ಚಣಿ ಎಂಬಲ್ಲಿಗೆ ದಾಳಿ ನಡೆಸಿದ್ದರು. ದಾಳಿ ವೇಳೆ, ಪ್ರಮುಖ ಆರೋಪಿಯಾಗಿದ್ದ ತಲಪಾಡಿ ಗ್ರಾಪಂ ಸದಸ್ಯ ಪರಾರಿಯಾಗಿದ್ದ. ಪ್ರಕರಣ ಸಂಬಂಧಿಸಿ ಉಳ್ಳಾಲ ಪೊಲೀಸರು ಬಳಿಕ ಆರೋಪಿಗಳನ್ನು ಬಂಧಿಸಿದ್ದರು.

ಆದರೆ ಈ ವೇಳೆ, ಕಾನ್ಸ್ ಟೇಬಲ್ ವಾಸುದೇವ ಆರೋಪಿಗಳಿಗೆ ಮಾಹಿತಿ ನೀಡಿದ್ದ. ಮತ್ತು ಅವರೊಂದಿಗೆ ಕೃತ್ಯದಲ್ಲಿ ಶಾಮೀಲಾಗಿದ್ದ ಎನ್ನುವುದು ಮೇಲ್ನೋಟಕ್ಕೆ ಕಂಡುಬಂದಿದ್ದರಿಂದ ಎಸಿಪಿ ನೇರವಾಗಿ ಪೊಲೀಸ್ ಕಮಿಷನರಿಗೆ ವರದಿ ಕೊಟ್ಟಿದ್ದರು. ಇಲಾಖಾ ತನಿಖೆ ಬಾಕಿಯಿರಿಸಿ ಪೊಲೀಸ್ ಕಮಿಷನರ್ ವಾಸುದೇವ ಅವರನ್ನು ಅಮಾನತು ಮಾಡಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!