ನುಡಿದಂತೆ ನಡೆದ ಕಾಂಗ್ರೆಸ್.!! ಇನ್ಮೇಲೆ ಬಸ್'ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ
ಕಾಂಗ್ರೆಸ್‌‌ನ ಮೊದಲ ಗ್ಯಾರಂಟಿ ಜಾರಿ - ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಇದಕ್ಕೆ ಎಪಿಎಲ್, ಬಿಪಿಎಲ್ ಎಂಬ ಯಾವುದೇ ನಿಬಂಧನೆಗಳಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಣೆ ಸಂಬಂಧ ಇಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ನಾಲ್ಕು ನಿಗಮಗಳ ವ್ಯವಸ್ಥಾಪಕ ಅಧಿಕಾರಿಗಳೊಂದಿಗೆ ಶಾಂತಿನಗರದ ಕೆಎಸ್ಆರ್ಟಿಸಿ ಕಚೇರಿಯಲ್ಲಿ ಸಭೆ ನಡೆಸಿ ಸುಧೀರ್ಘ ಚರ್ಚೆ ನಡೆಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪ್ರಣಾಳಿಕೆಯಲ್ಲಿ ನಾವು ಎಪಿಎಲ್, ಬಿಪಿಎಲ್ ಎಂದು ಹೇಳಿಲ್ಲ. ಮಹಿಳೆಯರು ಸರ್ಕಾರಿ ರಾಜ್ಯದಾದ್ಯಂತ ಉಚಿತವಾಗಿ ಪ್ರಯಾಣಿಸಿಬಹುದು ಎಂದರು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!