ಕಡಬ: ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು
ಕಂಬದಲ್ಲಿ ದುರಸ್ತಿ ವೇಳೆ ವಿದ್ಯುತ್‌ ಪ್ರವಹಿಸಿ ಪವರ್‌ಮ್ಯಾನ್‌ ಮೃತ್ಯು

ಡಬ: ವಿದ್ಯುತ್ ಕಂಬದಲ್ಲಿ ದುರಸ್ತಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಗಂಭೀರ ಗಾಯಗೊಂಡು ಲೈನ್ ಮ್ಯಾನ್ ಮೃತಪಟ್ಟ ಘಟನೆ ಜೂನ.1ರ ಗುರುವಾರದಂದು ಕಡಬದಲ್ಲಿ ನಡೆದಿದೆ.

ಕಡಬ ಮೆಸ್ಕಾಂ ಲೈನ್ ಮ್ಯಾನ್, ಬಾಗಲಕೋಟೆ ಮೂಲದ ದ್ಯಾಮಣ್ಣ ದೊಡ್ಮನಿ ಮೃತಪಟ್ಟವರು.

ಕಡಬದ ಮುಳಿಮಜಲು ಸಮೀಪದ ಕಾಯರಡ್ಕ ಎಂಬಲ್ಲಿ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆ ಕಂಡು ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!