ಉಳ್ಳಾಲ: ಜಾನುವಾರು ಸಾಗಾಟ ತಡೆದ ಬಜರಂಗದಳ ಕಾರ್ಯಕರ್ತರು
ಜಾನುವಾರು ಸಾಗಾಟ ತಡೆದ ಬಜರಂಗದಳ ಕಾರ್ಯಕರ್ತರು

ಉಳ್ಳಾಲ: ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿದ್ದ ವಾಹನ ತಡೆದಿರುವ ಬಜರಂಗದಳ ಕಾರ್ಯಕರ್ತರು ಐದು ಜಾನುವಾರುಗಳನ್ನು ರಕ್ಷಿಸಿ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಕುತ್ತಾರು ಸಮೀಪದ ಭಂಡಾರಬೈಲು ಎಂಬಲ್ಲಿ ಸಂಭವಿಸಿದೆ.

ಕೇರಳ ನೋಂದಣಿಯ ಏಸ್ ವಾಹನವು ಮುಡಿಪು, ಕೊಣಾಜೆ,ಮದಕ ಮಾರ್ಗವಾಗಿ 5 ಜಾನುವಾರುಗಳನ್ನ‌ ಅಕ್ರಮವಾಗಿ ತುಂಬಿಸಿ ಸಾಗುತ್ತಿದ್ದ ವೇಳೆ ಭಂಡಾರ ಬೈಲು ರಸ್ತೆಯ ಕಡಿದಾದ ಎತ್ತರದ ತಿರುವು ಏರಲಾರದೆ ನಿಂತು ಬಿಟ್ಟಿತ್ತು. ಈ ವೇಳೆ ಸ್ಥಳದಲ್ಲಿದ್ದ ಬಜರಂಗದಳದ ಕಾರ್ಯಕರ್ತರು ವಾಹನವನ್ನು ತಳ್ಳಿ ಚಾಲಕನಿಗೆ ಸಹಾಯ ಮಾಡಲು ಮುಂದಾಗಿದ್ದಾರೆ.

ವಾಹನದ ಹಿಂದುಗಡೆ ಮೀನಿನ ಪ್ಲಾಸ್ಟಿಕ್ ಟ್ರೇಗಳನ್ನ ರಾಶಿ ಹಾಕಲಾಗಿದ್ದು ಅದರೊಳಗಡೆ ಸದ್ದು ಕೇಳಿಸಿದಾಗ ಒಳಗಡೆ 5 ಜಾನುವಾರುಗಳನ್ನು ಉಸಿರುಗಟ್ಟಿಸಿ ಕಟ್ಟಿ ಹಾಕಿರುವುದನ್ನು ಸಹಾಯಕ್ಕೆ ಬಂದವರು ಕಂಡಿದ್ದಾರೆ. ತಕ್ಷಣ ವಾಹನದಲ್ಲಿದ್ದ ಚಾಲಕ ಸೇರಿ ಇಬ್ಬರು ಪರಾರಿಯಾಗಿದ್ದು,ಎಸ್ಕಾರ್ಟ್ ನೀಡುತ್ತಿದ್ದ ಇಬ್ಬರು ಬೈಕುಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ವಾಹನದಲ್ಲಿದ್ದ ಒಂದು ಕರು ತಪ್ಪಿಸಿದ್ದು,ಮತ್ತೊಂದು ಕರು,ಎರಡು ಹೋರಿ,ಒಂದು ಹಸುಗಳನ್ನು ಬಜರಂಗದಳ ಕಾರ್ಯಕರ್ತರು ರಕ್ಷಿಸಿ ಉಳ್ಳಾಲ ಠಾಣೆಗೆ ಒಪ್ಪಿಸಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!