ಮಂಗಳೂರು: ಎಂಡಿಎಂಎ ಮಾದಕ ವಸ್ತು ಮಾರಾಟ - ಇಬ್ಬರು ಅರೆಸ್ಟ್
ಎಂಡಿಎಂಎ ಮಾದಕ ವಸ್ತು ಮಾರಾಟ - ಇಬ್ಬರ ಬಂಧನ

ಮಂಗಳೂರು: ನಗರದಲ್ಲಿ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಫರಂಗಿಪೇಟೆ ಮಹಮ್ಮದ್ ಆಶ್ರಫ್ ಯಾನೆ ಚೋಟಾ ಆಶ್ರಫ್ (43 ವ), ಪೆರ್ಮನ್ನೂರು ನಿವಾಸಿ ದಾವೂದ್ ಫರ್ವೆಝ್ (36 ವ) ಬಂಧಿತ ಆರೋಪಿಗಳು.

ಬಂಧಿತ ಆರೋಪಿಗಳಿಬ್ಬರು ಬೆಂಗಳೂರಿನಿಂದ ನಿಷೇಧಿತ ಎಂಡಿಎಂಎ ಮಾದಕ ವಸ್ತುವನ್ನು ಕಾರಿನಲ್ಲಿ ಖರೀದಿಸಿಕೊಂಡು ಮಂಗಳೂರಿಗೆ ಬಂದು ನಗರದ ನೆಹರೂ ಮೈದಾನ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ ರವರ ನೇತೃತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಇನ್ನು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಅವರಿಂದ ಒಟ್ಟು 55.5 ಗ್ರಾಂ ತೂಕದ ರೂ. 2,77,500 ಮೌಲ್ಯದ ಎಂಡಿಎಂಎ ಮಾದಕ ವಸ್ತು, ಎರಡು ಮೊಬೈಲ್ ಫೋನ್ ಗಳು, 3230ರೂ ನಗದು, ಮಾರುತಿ ಬೆಲೆನೊ ಕಾರು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಆರೋಪಿಗಳ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!