ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾಗಿ  ಮೊಹಮ್ಮದ್ ನಯೀಮ್ ಮೊಮಿನ್ ನೇಮಕ
ಮಂಗಳೂರು ವಿವಿ: ನೂತನ ಕುಲಸಚಿವರಾಗಿ ಮೊಹಮ್ಮದ್ ನಯೀಮ್ ಮೊಮಿನ್ ಅಧಿಕಾರ ಸ್ವೀಕಾರ

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ 17 ನೇ ಕುಲಸಚಿವರಾಗಿ ಕೆ.ಎ.ಎಸ್ ಅಧಿಕಾರಿ  ಮೊಹಮ್ಮದ್ ನಯೀಮ್ ಮೊಮಿನ್ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಮೂಲತಃ ಬಾಗಲಕೋಟೆ ಜಿಲ್ಲೆಯವರಾದ ಇವರು, ಬೀದರ್ ಮತ್ತು ಹಾಸನ ಜಿಲ್ಲೆಗಳಲ್ಲಿ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೆ ವಿಧಾನ ಸೌಧದಲ್ಲಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಏಪ್ರಿಲ್, 2021 ರಿಂದ ಕುಲಸಚಿವರಾಗಿದ್ದ ಡಾ. ಕಿಶೋರ್ ಕುಮಾರ್ ಸಿ.ಕೆ ನೂತನ ಕುಲಸಚಿವರಿಗೆ ಅಧಿಕಾರ ಹಸ್ತಾಂತರಿಸಿದರು.

ಕುಲಪತಿ ಪ್ರೊ. ಜಯರಾಜ್ ಅಮೀನ್, ಕುಲಸಚಿವ (ಪರೀಕ್ಷಾಂಗ) ಡಾ. ರಾಜು ಕೃಷ್ಣ ಚಲನ್ನವರ್, ಹಣಕಾಸು ಅಧಿಕಾರಿ ಡಾ. ಸಂಗಪ್ಪ ವೈ, ವಿವಿಧ ನಿಕಾಯಗಳ ಡೀನರುಗಳು, ವಿಭಾಗ ಮುಖ್ಯಸ್ಥರುಗಳು ನೂತನ ಕುಲಸಚಿವರಿಗೆ ಅಭಿನಂದನೆ ಸಲ್ಲಿಸಿದರು. ಡಾ. ಕಿಶೋರ್ ಕುಮಾರ್ ಸಿ. ಕೆ ಅವರು ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾಗಿ ಮುಂದುವರಿಯಲಿದ್ದಾರೆ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!