ಉಡುಪಿ: ಮೊಬೈಲ್ ಶೂಟಿಂಗ್ ಪ್ರಕರಣ - ವಿದ್ಯಾರ್ಥಿನಿಯರಿಗೆ ಜಾಮೀನು.!
ಉಡುಪಿ ವಿವಾದ - ವಿದ್ಯಾರ್ಥಿನಿಯರಿಗೆ ಜಾಮೀನು

ಉಡುಪಿ: ಇಡೀ ದೇಶದಲ್ಲೇ ಸಂಚಲನ ಮೂಡಿಸಿದ ಉಡುಪಿಯ ನೇತ್ರಜ್ಯೋತಿ ಕಾಲೇಜಿನ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿತ ವಿದ್ಯಾರ್ಥಿನಿಯರಿಗೆ ಜಾಮೀನು ಸಿಕ್ಕಿದೆ ಎಂದು ತಿಳಿದುಬಂದಿದೆ.

ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರಾದ ಶಬನಾಜ್, ಆಲ್ಪಿಯಾ, ಆಲಿಮತುಲ್ ಶಾಫಿಯಾ ಉಡುಪಿ ಜಿಲ್ಲಾ ನ್ಯಾಯಾಲಯ ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು ನೀಡಿದೆ.

ಶಬನಾಜ್, ಆಲ್ಪಿಯಾ, ಆಲಿಮತುಲ್ ಶಾಫಿಯಾಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ವಿಡಿಯೋ ಮಾಡಿದ ಆರೋಪ ಎದುರಿಸುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಮಲ್ಪೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದರು. ಪ್ರಕರಣದ ಹಿನ್ನಲೆಯಲ್ಲಿ ನ್ಯಾಯಾಲಯಕ್ಕೆ ಹಾಜರಾದ ವಿದ್ಯಾರ್ಥಿನಿಯರಿಗೆ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಉಡುಪಿ ವಿಡಿಯೋ ಪ್ರಕರಣದ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದ ವಿದ್ಯಾರ್ಥಿನಿ - https://youtu.be/q8yxVy4v4Oc

https://youtu.be/q8yxVy4v4Oc

 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!