ಮಂಗಳೂರು: 5ನೇ ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು.!
ಮಹಡಿಯಿಂದ ಜಾರಿ ಬಿದ್ದು ಯುವಕ ಮೃತ್ಯು

ಮಂಗಳೂರು: ಮೆಡಿಕಲ್‌ ಕಾಲೇಜಿನ ವಿದ್ಯಾರ್ಥಿಯೊಬ್ಬ ಕದ್ರಿ ಶಿವಭಾಗ್‌ನಲ್ಲಿರುವ ಅಪಾರ್ಟ್ ಮೆಂಟ್‌ನ 5ನೇ ಮಹಡಿಯಿಂದ ಜಾರಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.

ಮೃತಪಟ್ಟ ಯುವಕನನ್ನು ಅಡ್ಯಾರು ನಿವಾಸಿ, ಪ್ರಸ್ತುತ ಕದ್ರಿ ಶಿವಭಾಗ್‌ನಲ್ಲಿ ವಾಸವಾಗಿದ್ದ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸಮಯ್‌ (21) ಎಂದು ಗುರುತಿಸಲಾಗಿದೆ.

ಸಮಯ್‌ ಅವರು ಫ್ಲ್ಯಾಟ್‌ನ ಬಾಲ್ಕನಿಯಲ್ಲಿ ಬೆಳಗ್ಗಿನ ಸಮಯದಲ್ಲಿ ಓದುತ್ತಿದ್ದಾಗ ಅವರ ತಾಯಿ ಕಾರು ವಾಷ್‌ ಮಾಡಲು ನೆಲಮಹಡಿಗೆ ಹೋಗೋಣ ಎಂದಾಗ ಸಹಾಯ ಮಾಡಲು ಬಕೆಟ್‌ ತೆಗೆದುಕೊಂಡು ಬರಲು ಸಮಯ್‌ ಅವರು ಬಾತ್‌ರೂಂಗೆ ಹೋಗಿ ಬರುವ ವೇಳೆ ತಾಯಿ ನೆಲ ಮಹಡಿಗೆ ತಲುಪಿದ್ದರು. ಸಮಯ್‌ ಅವರು ಫ್ಲ್ಯಾಟ್‌ನ ಬಾಲ್ಕನಿಗೆ ಬಂದು ಕಾರು ತೊಳೆಯಲು ಬಕೆಟ್‌ ಕೊಂಡು ಹೋಗಿದ್ದೀರಾ ಎಂದು ತಾಯಿ ಜೊತೆ ಕೇಳಲು ಬಗ್ಗಿದ ವೇಳೆ ಸಮಯ್‌ ಮಳೆ ನೀರಿನ ಹನಿಯಿಂದ ಜಾರಿ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ಮೃತಪಟ್ಟಿದ್ಧಾರೆ.

ಸಮಯ್‌ ತಂದೆ ಸಿವಿಲ್‌ ಎಂಜಿನಿಯರ್‌ ಆಗಿದ್ದು, ತಾಯಿ ಗೃಹಿಣಿಯಾಗಿದ್ದಾರೆ. ಈ ದಂಪತಿಯ ಇಬ್ಬರು ಗಂಡು ಮಕ್ಕಳಲ್ಲಿ ಸಮಯ್‌ ಹಿರಿಯವರು. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಕದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!