ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣ - ಪ್ರಧಾನಿಯಿಂದ ಶಿಲಾನ್ಯಾಸ
ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣವನ್ನು ವಿಶ್ವದರ್ಜೆಗೆ ಅಭಿವೃದ್ಧಿ ಪಡೆಸಲು ಶಿಲಾನ್ಯಾಸ

ಮಂಗಳೂರು: ಮಂಗಳೂರು ಜಂಕ್ಷನ್‌ನಲ್ಲಿ ಅಂತಾರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಆ. 6ರಂದು ಶಿಲಾನ್ಯಾಸ ನೆರವೇರಿಸಲಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ಅವರನ್ನು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅಭಿನಂದಿಸಿದ್ದಾರೆ.

ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಡಿ ಇದೇ ರವಿವಾರ (ಆ. 6ರಂದು)  ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ವೀಡಿಯೋ ಕಾನ್ಫರೆನ್ಸ್ ಮೂಲಕ ಶಿಲಾನ್ಯಾಸ ನೆರವೇರಿಸಲಿದ್ದಾರೆ. ವೀಡಿಯೊ ಕಾನ್ಫರೆನ್ಸ್ ಮೂಲಕ ಏಕ ಕಾಲದಲ್ಲಿ ದೇಶದಾದ್ಯಂತ 500 ರೈಲ್ವೇ ನಿಲ್ದಾಣಗಳ ಮರು‌ ಅಭಿವೃದ್ಧಿ ಯೋಜ‌ನೆಗೆ ಪ್ರಧಾನಿಯವರು ಆಗಸ್ಟ್ 6 ರಂದು ಚಾಲನೆ ನೀಡುವ ಸಾಧ್ಯತೆ. 

ಅಂತಾರಾಷ್ಟ್ರೀಯ ಮಟ್ಟದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವು 19.32 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದೆ. 2023-24ನೆ ಸಾಲಿನ ಬಜೆಟ್‌ ನಲ್ಲಿ ದ.ಕ. ಜಿಲ್ಲೆಯ ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಸೇರಿದಂತೆ ಮಂಗಳೂರು ಕೇಂದ್ರ ನಿಲ್ದಾಣ, ಬಂಟ್ವಾಳ ಹಾಗೂ ಸುಬ್ರಹ್ಮಣ್ಯ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಯಡಿ ಅಭಿವೃದ್ಧಿ ಪಡಿಸಲು ಘೋಷಣೆ ಮಾಡಲಾಗಿತ್ತು. ಈ ಯೋಜನೆಯ ಇತರೆ ರೈಲು ನಿಲ್ದಾಣಗಳ ನಿರ್ಮಾಣ ಕಾರ್ಯ ಶೀಘ್ರದಲ್ಲಿಯೇ ಕೈಗೆತ್ತಿಕೊಳ್ಳಲಾಗುವುದು ಎಂದು ಸಂಸದರು ತಿಳಿಸಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!