ಮಂಗಳೂರು: ಗುರುಪುರ ಗ್ರಾಮ ಪಂಚಾಯತ್ ಎಸ್ಡಿಪಿಐ ತೆಕ್ಕೆಗೆ.!
ಅಧ್ಯಕ್ಷೆಯಾಗಿ ಸಫಾರ - ಉಪಾಧ್ಯಕ್ಷರಾಗಿ ದಾವೂದ್ ಆಯ್ಕೆ

ಮಂಗಳೂರು: ಮಂಗಳೂರು ತಾಲೂಕಿನ ಗುರುಪುರ ಗ್ರಾಮ ಪಂಚಾಯತ್ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯು ಆ.9ರಂದು ನಡೆಯಿತು. ಗುರುಪುರ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷೆಯಾಗಿ ಎಸ್ಡಿಪಿಐ ಬೆಂಬಲಿತ ಅಭ್ಯರ್ಥಿ ಸಫಾರ ನಾಸೀರ್ ಮತ್ತು ಉಪಾಧ್ಯಕ್ಷರಾಗಿ ಪಕ್ಷೇತರ ಅಭ್ಯರ್ಥಿ ದಾವೂದ್ ಆಯ್ಕೆಯಾಗಿದ್ಧಾರೆ.

ಗುರುಪುರ ಗ್ರಾಮ ಪಂಚಾಯತ್ ಒಟ್ಟು 28 ಸ್ಥಾನಗಳಲ್ಲಿ ಎಸ್ ಡಿಪಿಐ ಬೆಂಬಲಿತ 10 ಸದಸ್ಯರು ಕಾಂಗ್ರೆಸ್ ಬೆಂಬಲಿತ 11 ಸದಸ್ಯರಲ್ಲಿ 2 ಮಂದಿ ಸದಸ್ಯರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರಿಂದ ಬಿಜೆಪಿ ಸದಸ್ಯರು ಸಂಖ್ಯೆ 8 ಕ್ಕೆ ಏರಿದೆ ಒರ್ವ ಪಕ್ಷೇತರ ಸದಸ್ಯ ಇರುವ‌ ಗುರುಪುರ ಗ್ರಾಮ ಪಂಚಾಯತ್ ನಲ್ಲಿ ಇಂದು ನಡೆದ ಚುನಾವಣೆಯಲ್ಲಿ ಒರ್ವ ಪಕ್ಷೇತರ ಅಭ್ಯರ್ಥಿಯ ಬೆಂಬಲದೊಂದಿಗೆ ಎಸ್ ಡಿಪಿಐ ಪಕ್ಷವು ಅಧಿಕಾರದ ಚುಕ್ಕಾಣಿ ಹಿಡಿಯಿತು.

ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎಸ್ ಡಿಪಿಐ ಬೆಂಬಲಿತ ಅಭ್ಯರ್ಥಿ ಸಫಾರ 11 ಮತಗಳು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶೋಭಾ 9 ಮತಗಳು ಪಡೆದರು. ಅದೇ ರೀತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ದಾವೂದ್ 11 ಮತಗಳು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎ.ಕೆ.ಅಶ್ರಫ್ 9 ಮತಗಳನ್ನು ಪಡೆದರು. ಬಿಜೆಪಿ ಬೆಂಬಲಿತ ಸದಸ್ಯರು ಚುನಾವಣಾ ಪ್ರಕ್ರಿಯೆಯಲ್ಲಿ ಗೈರು ಹಾಜರಾಗಿದ್ದರು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!