ಮಂಗಳೂರು: ಯುವತಿ ನಾಪತ್ತೆ - ತಂದೆಯಿಂದ ದೂರು
ಉದ್ಯೋಗಕ್ಕೆಂದು ಬಂದಿದ್ದ ಯುವತಿ ನಾಪತ್ತೆ ದೂರು ದಾಖಲು

ಮಂಗಳೂರು: ಉದ್ಯೋಗಕ್ಕೆಂದು ಮಂಗಳೂರಿಗೆ ಬಂದಿದ್ದ ಯುವತಿ ನಾಪತ್ತೆಯಾಗಿರುವ ಬಗ್ಗೆ ಆಕೆಯ ತಂದೆ ಕದ್ರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಹೊನ್ನಾವರದ ಸೋನಿಯಾ ರೋಡ್ರಿಗಸ್‌ (23) ನಾಪತ್ತೆಯಾಗಿರುವ ಯುವತಿಯಾಗಿದ್ದಾಳೆ.

ಈಕೆ ಸುಮಾರು 8 ತಿಂಗಳ ಹಿಂದೆ ಉದ್ಯೋಗಕ್ಕಾಗಿ ಮಂಗಳೂರಿಗೆ ಬಂದಿದ್ದು, ಸೋನಿಯಾ ಬೆಂದೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಿರುವುದಾಗಿ ತಿಳಿಸಿದ್ದಳು. ಇತ್ತೀಚೆಗೆ ಕರೆಗಳನ್ನು ಸ್ವೀಕರಿಸದ ಹಿನ್ನೆಲೆಯಲ್ಲಿ ಅಪಾರ್ಟ್‌ಮೆಂಟ್‌ಗೆ ಬಂದು ವಿಚಾರಿಸಿದಾಗ ಆಕೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲವೆಂದು ಅಪಾರ್ಟ್‌ ಮೆಂಟ್‌ನ ನಿವಾಸಿಗಳು ಹೇಳಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ನಾಪತ್ತೆ ಪ್ರಕರಣ ದಾಖಲಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!