ಚಾರ್ಮಾಡಿ: 100 ಅಡಿ ಪ್ರಪಾತಕ್ಕೆ ಉರುಳಿದ ಲಾರಿ - ಜೀವ ಉಳಿಸಿದ ಮರ.!
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು: ಪ್ರಪಾತಕ್ಕೆ ಉರುಳಿದ ಲಾರಿ

ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು 100 ಅಡಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ದಟ್ಟ ಮಂಜು ಹಾಗೂ ಮಳೆಯಿಂದ ದಾರಿ ಕಾಣದೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲಿ ಸಾಗಿಸುತ್ತಿದ್ದ ಲಾರಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ಉರುಳಿ ಬಿದ್ದು ಈ ಘಟನೆ ನಡೆದಿದೆ.

ದುರ್ಘಟನೆಯಲ್ಲಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಪಲ್ಟಿಯಾಗುತ್ತಿದ್ದಂತೆ 100 ಅಡಿ ಪ್ರಪಾತದಲ್ಲಿ ಮರಕ್ಕೆ ಸಿಕ್ಕಿಕೊಂಡಿತ್ತು. ಪ್ರಪಾತದಲ್ಲಿ ಬೀಳಲಿದ್ದ ಇಬ್ಬರ ಜೀವ ಮರ ಉಳಿಸಿದೆ. ಕೂಡಲೇ ಮಾಹಿತಿ ಪಡೆದ ಸ್ಥಳಿಯರು ಲಾರಿ ಚಾಲಕ-ಕ್ಲೀನರ್ ನನ್ನು ರಕ್ಷಣೆ ಮಾಡಿದ್ದಾರೆ. ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!