ಚೈತ್ರಾ ಕುಂದಾಪುರ ಪ್ರಕರಣ - ಹಾಲಶ್ರೀ ಸ್ವಾಮೀಜಿ ಅರೆಸ್ಟ್.!
ಒಡಿಶಾದಲ್ಲಿ ಸಿಕ್ಕಿಬಿದ್ದ ಅಭಿನವ ಹಾಲಶ್ರೀ ಸ್ವಾಮೀಜಿ

ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಬಹುಕೋಟಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಆರೋಪಿ ಹಾಲಶ್ರೀ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಇಂದು ಒಡಿಶಾದ ಕಟಕ್​ನಲ್ಲಿ ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇನ್ನು ಚಲಿಸುತ್ತಿದ್ದ ರೈಲಿನಲ್ಲಿ ಹಾಲಶ್ರೀಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಒಡಿಶಾ ಪೊಲೀಸರ ಸಹಕಾರದಿಂದ ಹಾಲಶ್ರೀ ಅರೆಸ್ಟ್ ಆಗಿದ್ದು ಇಂದು ರಾತ್ರಿ ಕಟಕ್​ನಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ.

Chaitra Kundapur Case - ಹಾಲಶ್ರೀ ಸ್ವಾಮೀಜಿ ಹೈದರಾಬಾದ್ ನಲ್ಲಿ ಪತ್ತೆ? ಎಸ್ಕೇಪ್ ಗೂ  ಮುನ್ನ ನಾಲ್ಕು ಮೊಬೈಲ್ ಖರೀದಿ? - reports say that halasri swamiji who is the  third accused in chitra kundapura scam ...

ಮೂರು ದಿನಗಳ ಹಿಂದೆ, ಸ್ವಾಮೀಜಿಯವರ ಖಾಸಗಿ ಡ್ರೈವರ್ ಲಿಂಗರಾಜುನನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು ಆತನ ವಿಚಾರಣೆ ನಡೆಸಿದಾಗ, ಸ್ವಾಮೀಜಿಯವರು ತಾವೇ ಖುದ್ದಾಗಿ ಕಾರು ಚಲಾಯಿಸಿಕೊಂಡು ಮೈಸೂರಿಗೆ ಹೋಗಿದ್ದಾರಿಯೂ, ಅಲ್ಲಿ ಕಾರಿನ ನಂಬರ್ ಪ್ಲೇಟ್ ಗಳನ್ನು ಕಳಚಿಟ್ಟು ಅಲ್ಲಿಂದ ಹೈದರಾಬಾದ್ ಗೆ ತೆರಳಿದ್ದಾಗಿಯೂ ತಿಳಿದುಬಂದಿತ್ತು. ಹಾಗಾಗಿ, ಸಿಸಿಬಿ ಪೊಲೀಸರ ತಂಡವೊಂದು ಹೈದರಾಬಾದ್ ತೆರಳಿತ್ತು.

ಆದರೆ, ಸೆ. 19ರ ಬೆಳಗ್ಗೆ ಬಂದ ವರ್ತಮಾನದ ಪ್ರಕಾರ, ಸ್ವಾಮೀಜಿಯವರನ್ನು ಒಡಿಶಾದಲ್ಲಿ ಬಂಧಿಸಲಾಗಿದೆ. ಒಡಿಶಾದ ಕಟಕ್ ನಲ್ಲಿನ ಖಾಸಗಿ ಹೋಟೆಲ್ ಒಂದರಲ್ಲಿ ನೆಲೆಸಿದ್ದ ಸ್ವಾಮೀಜಿಯನ್ನು ಪತ್ತೆ ಹಚ್ಚಿದ್ದ ಪೊಲೀಸರು ಅವರು ಹೋಟೆಲ್ ಗೆ ಹೋಗಿದ್ದರು. ಆದರೆ, ಅಷ್ಟರಲ್ಲಾಗಲೇ ಅವರು ಅಲ್ಲಿಂದ ಕಾಲ್ಕಿತ್ತಿದ್ದರು ಎಂದು ಹೇಳಲಾಗಿದೆ.

ಪ್ರತಿ ಗಂಟೆಗೆ ಸ್ಥಳ ಬದಲಾಯಿಸುತ್ತಿದ್ದ ಸ್ವಾಮೀಜಿ, ಹಾಲಶ್ರೀ ಅವರು ರೈಲಿನಲ್ಲಿ ಹೋಗಿರುವ ಬಗ್ಗೆ ಮಾಹಿತಿ ಸಿಕ್ಕಿತು. ಕಾವಿಯನ್ನು ತ್ಯಜಿಸಿ, ಟೀ ಶರ್ಟ್, ಪ್ಯಾಂಟ್ ಹಾಕಿಕೊಂಡು ವೇಷ ಮರೆಸಿಕೊಂಡಿದ್ದರು. ಕಟಕ್ ನಿಂದ ಬೌದ್ಧ್ ಗಯಾಕ್ಕೆ ತೆರಳುವ ರೈಲಿನಲ್ಲಿದ್ದರು ಅವರು. ಆದರೂ, ಅವರನ್ನು ಸೂಕ್ತವಾಗಿ ಗುರುತು ಹಿಡಿಯುವಲ್ಲಿ ಸಿಸಿಬಿ ಯಶಸ್ವಿಯಾಗಿದೆ. ಅವರನ್ನು ಕಟಕ್ ನಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!