ಉಡುಪಿ: ಅನ್ಯಕೋಮಿನ ಜೋಡಿಯನ್ನು ತಡೆದ ಯುವಕರ ಮೇಲೆ ಬಿತ್ತು ಕೇಸ್.!
ಮುಸ್ಲಿಂ ಯುವಕನ ಜತೆ ಫಾಲ್ಸ್‌ಗೆ ತೆರಳಿದ ಹಿಂದೂ ಯುವತಿ - 10 ಮಂದಿ ವಿರುದ್ದ ದೂರು

ಉಡುಪಿ: ಅನ್ಯಕೋಮಿಗೆ ಸೇರಿದ ಯುವಕ ಯುವತಿಯನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸಿ ವಿಚಾರಣೆ ನಡೆಸಿ ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಆರೋಪದ ಮೇಲೆ 10 ಮಂದಿಯ ವಿರುದ್ದ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ತಿಂಗಳು ನಡೆದಿರುವ ಘಟನೆ ಇದಾಗಿದ್ದು, ಹಿಂದೂ ಯುವತಿಯೊಬ್ಬಳು ಮುಸ್ಲಿಂ ಯುವಕನ ಜೊತೆ ಆಗುಂಬೆ ಸಮೀಪದ ಸಿರಿಮನೆ ಫಾಲ್ಸ್ ಗೆ ಹೋಗಿದ್ದಾರೆ. ಈ ವೇಳೆ ವಾಪಸ್ ಬರುವಾಗ ಅನ್ಯಮತೀಯ ಜೋಡಿಯನ್ನು ಯುವಕರ ಗುಂಪು ತಡೆದು ವಿಚಾರಣೆ ಮಾಡಿದ್ದರು. ವಿಚಾರಣೆಯ ವೇಳೆ ವಿಡಿಯೋ ಮಾಡದಂತೆ ಯುವತಿ ಮನವಿ ಮಾಡಿದ್ದಳು. ಬಳಿಕ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ನಂತರ ಆಗುಂಬೆ ಪೊಲೀಸರು ಯುವತಿ ಹಾಗೂ ಯುವಕನ ಮನೆಯವರನ್ನು ಠಾಣೆಗೆ ಕರೆಸಿದ್ದರು. 

ಆದ್ರೆ, ಇಬ್ಬರ ಮನೆಯವರು ಪರಿಚಯಸ್ಥರಾಗಿದ್ದರಿಂದ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳದೇ ವಾಪಸ್ ಕಳುಹಿಸಿದ್ದರು. ಘಟನೆಯ ವೇಳೆ ಮಾಡಿದ್ದ ವಿಡಿಯೋವನ್ನು ತಿಂಗಳ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ಫೇಸ್ ಬುಕ್ ಪೇಜ್ ಒಂದರಲ್ಲಿ ವೀಡಿಯೋ ಅಪ್ಲೋಡ್ ಮಾಡಲಾಗಿದ್ದು, ಇದೀಗ ಇನ್ಸ್ಸ್ಟಾಗ್ರಾಂ, ವಾಟ್ಸಾಪ್ ನಲ್ಲಿ ಯುವಕ, ಯುವತಿಯ ಫೋಟೋ ವೀಡಿಯೋ ವೈರಲ್ ಆಗಿದೆ. ಈ ವಿಡಿಯೋ ವೈರಲ್ ಬೆನ್ನಲ್ಲೇ ಸದ್ಯ ಯುವತಿಯ ಸಹೋದರ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!