ಮಂಗಳೂರು: (ಅ.9) ಬಜರಂಗದಳ ನೇತೃತ್ವದಲ್ಲಿ ನಡೆಯಲಿದೆ "ಬೃಹತ್ ಶೌರ್ಯ ಜಾಗರಣ ರಥಯಾತ್ರೆ"
ಬೃಹತ್ ಶೌರ್ಯ ಜಾಗರಣ ರಥಯಾತ್ರೆ

ಪತ್ರಿಕಾಗೋಷ್ಠಿ

ಮಂಗಳೂರು: ಬಜರಂಗದಳದ ನೇತೃತ್ವದಲ್ಲಿ ಅ. 9 ರಂದು ಬೃಹತ್ ಶೌರ್ಯ ಜಾಗರಣ ರಥಯಾತ್ರೆ ಮತ್ತು ಬೃಹತ್ ಸಾರ್ವಜನಿಕ ಸಭೆ ಮಂಗಳೂರಿನಲ್ಲಿ ನಡೆಯಲಿದೆ ಎಂದು ವಿಶ್ವಹಿಂದು ಪರಿಷತ್ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದೆ.

ಇಂದು ಕದ್ರಿ ವಿಶ್ವಶ್ರೀ ಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖಂಡರು ಈ ಶೌರ್ಯ ಜಾಗರಣ ರಥ ಯಾತ್ರೆಯು ಸೆ.25ರಂದು ಚಿತ್ರದುರ್ಗದಿಂದ ಹೊರಟು ಅ. 9ಕ್ಕೆ ಮಂಗಳೂರಿಗೆ ಆಗಮಿಸಲಿದೆ ಎಂದರು.

ರಥಕ್ಕೆ ಅದ್ದೂರಿ ಸ್ವಾಗತ ನೀಡಿ ಬಳಿಕ ಮಂಗಳೂರಿನಲ್ಲಿ ಬೃಹತ್ ಶೌರ್ಯ ಜಾಗರಣ ರಥವನ್ನು ಅದ್ದೂರಿ ಸ್ವಾಗತದೊಂದಿಗೆ ನಗರದ ಅಂಬೇಡ್ಕರ್ ವೃತ್ತದಿಂದ ಕದ್ರಿ ಮೈದಾನದವರೆಗೆ ಬೃಹತ್ ಶೋಭಾಯಾತ್ರೆ ನಡೆಯಲಿದ್ದು, ವಿಶ್ವ ಹಿಂದೂ ಪರಿಷದ್ ಬಜರಂಗದಳದ ಪ್ರಮುಖರು ಸೇರಿದಂತೆ ವಿವಿಧ ಗಣ್ಯರು ಈ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ದೇಶದ ಮಹಾಪುರುಷರ ,ಶೌರ್ಯ ಪರಾಕ್ರಮಗಳ, ಬಲಿದಾನಗೈದ ವೀರರ ಸ್ತಬ್ದ ಚಿತ್ರಗಳೊಂದಿಗೆ, ಚಂಡೆ, ಕೊಂಬು ವಾದನಗಳೊಂದಿಗೆ ಅದ್ದೂರಿ ಶೋಭಾಯಾತ್ರೆಯು ಕದ್ರಿ ಮೈದಾನಕ್ಕೆ ಸಾಗಿ ಬೃಹತ್ ಸಾರ್ವಜನಿಕ ಸಭೆ ನಡೆಯಲಿದೆ.

ಈ ಸಭೆಯಲ್ಲಿ ರಾಷ್ಟ್ರೀಯವಾದಿ ಮತ್ತು ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ರಾಷ್ಟ್ರ ಕಾರ್ಯದಲ್ಲಿ ಹಿಂದೂಗಳ ಜಾಗೃತಿಗೋಸ್ಕರ ಈ ಶೌರ್ಯ ಜಾಗರಣದ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಸಂದರ್ಭ ಶೌರ್ಯ ಜಾಗರಣ ರಥಯಾತ್ರೆ ಸ್ವಾಗತ ಸಮಿತಿ ಅಧ್ಯಕ್ಷ ಗಿರಿಧರ್ ಶೆಟ್ಟಿ, ಶೌರ್ಯ ಜಾಗರಣ ರಥಯಾತ್ರೆ ಸ್ವಾಗತ ಸಮಿತಿ ಕಾರ್ಯದರ್ಶಿ ಭುಜಂಗ ಕುಲಾಲ್, ಜಿಲ್ಲಾಧ್ಯಕ್ಷ ಎಚ್ .ಕೆ ಪುರುಷತ್ತೋಮ, ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್, ಜಿಲ್ಲಾ ಸಂಯೋಜಕ ನವೀನ ಮೂಡುಶೆಡ್ಡೆ ಉಪಸ್ಥಿತರಿದ್ದರು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!