ಗೂಗಲ್ ಮ್ಯಾಪ್ ನಂಬಿ ಹೋದವರು ಬಿದ್ದಿದ್ದು ನದಿಗೆ - ಇಬ್ಬರು ಸಾವು.!
ಗೂಗಲ್​ ಮ್ಯಾಪ್ ಮೊರೆ ಹೋದ ಇಬ್ಬರು ಯುವ ವೈದ್ಯರು ನದಿಗೆ ಬಿದ್ದು ಸಾವು

ಗೂಗಲ್‌ ಮ್ಯಾಪ್‌ ಮೊರೆ ಹೋಗಿ ಕಾರೊಂದು  ನದಿಗೆ ಬಿದ್ದು ಇಬ್ಬರು ವೈದ್ಯರು ಸಾವನ್ನಪ್ಪಿದ ಘಟನೆ ಶನಿವಾರ ತಡರಾತ್ರಿ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಕಾರಿನಲ್ಲಿದ್ದ ಇನ್ನೂ ಮೂವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರ ಹೆಸರು ಅದ್ವೈತ್ (29) ಮತ್ತು ಅಜ್ಮಲ್ (29) ಗುರುತಿಸಲಾಗಿದೆ. ಖಾಸಗಿ ಆಸ್ಪತ್ರೆಯ ವೈದ್ಯರಾಗಿದ್ದರು. ಡಾ.ಅದ್ವೈತ್ ಕಾರು ಚಾಲನೆ ಮಾಡುತ್ತಿದ್ದು, ಮೊಬೈಲ್ ನ ಗೂಗಲ್ ಮ್ಯಾಪ್ ಆನ್ ಮಾಡಿದ್ದರು ಎಂದು ಹೇಳಲಾಗುತ್ತಿದೆ.

ಸಮಯದಲ್ಲಿ, ಗೋತುರುತ್‌ನಲ್ಲಿ ಭಾರೀ ಮಳೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗೋಚರತೆ ಕೂಡ ತುಂಬಾ ಕಡಿಮೆ ಇತ್ತು. ಕಾರು ಚಲಾಯಿಸುತ್ತಿದ್ದ ಯುವಕ ಗೂಗಲ್ ಮ್ಯಾಪ್ ತೋರಿಸಿದ ಮಾರ್ಗದಲ್ಲಿ ಹೋಗುತ್ತಿದ್ದ. ಎಡ ತಿರುವಿನಲ್ಲಿ ಕಾರನ್ನು ತಿರುಗಿಸಬೇಕಾಗಿದ್ದರೂ ಆಕಸ್ಮಿಕವಾಗಿ ಮುಂದೆ ಹೋಗಿದ್ದರಿಂದ ಕಾರು ನದಿಗೆ ಬಿದ್ದಿದೆ ಎನ್ನಲಾಗಿದೆ.

ಅಪಘಾತವನ್ನು ಕಂಡ ಸ್ಥಳೀಯರು ತಕ್ಷಣ ಸ್ಥಳದಲ್ಲಿ ಜಮಾಯಿಸಿದರು. ಅಲ್ಲಿದ್ದ ವ್ಯಕ್ತಿಯೊಬ್ಬರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಶನಿವಾರ ಡಾ.ಅದ್ವೈತ್ ಅವರ ಜನ್ಮದಿನವಾಗಿತ್ತು. ಕಾರಿನಲ್ಲಿ ಅದ್ವೈತ್ ಜೊತೆಗೆ ನಾಲ್ವರು ಇದ್ದರು. ಐವರೂ ಕೊಚ್ಚಿಯಿಂದ ಕೊಡಂಗಲ್ಲೂರಿಗೆ ಹಿಂತಿರುಗುತ್ತಿದ್ದರು. ಅದ್ವೈತ್ ಹುಟ್ಟುಹಬ್ಬದ ನಿಮಿತ್ತ ಈ ಮಂದಿ ಶಾಪಿಂಗ್‌ಗೆ ತೆರಳಿದ್ದರು ಎಂದು ವರದಿಯಾಗಿದೆ.

ಇದೇ ವೇಳೆ ಅಪಘಾತದಿಂದ ಬದುಕುಳಿದಿರುವ ಡಾ.ಗಾಜಿಕ್ ತಬ್ಸಿರ್, ಜಿಪಿಎಸ್ ನೆರವಿನಿಂದ ಮುಂದೆ ಹೋಗುತ್ತಿದ್ದೆವು ಎಂದು ತಿಳಿಸಿದರು. ನಾನು ಕಾರನ್ನು ಓಡಿಸುತ್ತಿರಲಿಲ್ಲ. ಗೂಗಲ್ ಮ್ಯಾಪ್ ನೀಡಿದ ತಪ್ಪು ನಿರ್ದೇಶನದಿಂದ ಅಥವಾ ವಾಹನದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆಯೇ ಎಂಬ ಬಗ್ಗೆ ನಾವು ಯಾವುದೇ ನಿಖರವಾದ ಉತ್ತರವನ್ನು ನೀಡಲು ಸಾಧ್ಯವಿಲ್ಲ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ. ಪೊಲೀಸರು ಅಪಘಾತದ ತನಿಖೆಯಲ್ಲಿ ನಿರತರಾಗಿದ್ದಾರೆ. ಇಬ್ಬರ ಮೃತದೇಹಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!