ಮಂಗಳೂರು: 'ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡ' - ಶಾಸಕ ಕಾಮತ್
'ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗುತ್ತಿದೆ ಎಂದ ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು: ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಜಿಹಾದಿ ಮನಸ್ಥಿತಿಯ ಕಿಡಿಗೇಡಿಗಳು ಪೊಲೀಸರೂ ಸೇರಿದಂತೆ ಹಲವು ಮನೆಗಳ ಮೇಲೆ ಕಲ್ಲು ತೂರಿರುವ ಘಟನೆ ನಡೆದಿದ್ದು ಹಿಂದೂಗಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಇದೇ ಶಿವಮೊಗ್ಗದಲ್ಲಿ ಕಳೆದ ವಾರ ಭಾರೀ ಸಂಖ್ಯೆಯೊಂದಿಗೆ ಯಾವ ಗಲಭೆಯೂ ಇಲ್ಲದೇ ಗಣೇಶ ವಿಸರ್ಜನೆ ಆಯಿತು.ಆದರೆ ಈದ್ ಮೆರವಣಿಗೆಯಲ್ಲಿ ಕೋಮುದಳ್ಳುರಿ ಹೊತ್ತಿಸಲಾಗಿದೆ. ಇದಕ್ಕೆಲ್ಲ ಕಾರಣ ಜಿಹಾದಿ ಮಾನಸಿಕತೆಯ ಕಿಡಿಗೇಡಿಗಳು ಹಾಗೂ ಸೆಕ್ಯುಲರ್ ಮುಖವಾಡದ ಕಾಂಗ್ರೆಸ್ ಸರ್ಕಾರ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಕ್ರೋಶ ವ್ಯಕ್ತಪಡಿಸಿದರು.

ಔರಂಗಜೇಬನಂತಹ ಮತಾಂಧನ ಬ್ಯಾನರ್ ಅಳವಡಿಸುವುದು, ಕೈಯಲ್ಲಿ ತಲ್ವಾರ್ ಹಿಡಿದು ಪ್ರಚೋದಕಾರಿ ಘೋಷಣೆಗಳನ್ನು ಕೂಗುವುದು, ಕೊನೆಗೆ ಹಿಂದೂಗಳ ಮೇಲೆ ಕಲ್ಲೆಸೆಯುವುದು ಇವೆಲ್ಲ ವ್ಯವಸ್ಥಿತ ಗಲಭೆಯ ಷಡ್ಯಂತ್ರದ ಭಾಗವಾಗಿದೆ. ಟಿಪ್ಪು ಸುಲ್ತಾನ್‌ ಕಾಲಡಿಯಲ್ಲಿ ಕೇಸರಿ ಬಣ್ಣದ ಪಗಡೆ ತೊಟ್ಟ ವ್ಯಕ್ತಿ ಮಲಗಿರುವ ಕಟೌಟ್‌ ಅಳವಡಿಸಿದ್ದು ವಿವಾದವಾಗುತ್ತಿದ್ದಂತೆ ಸ್ವತಃ ಎಸ್‌ಪಿ ನೇತೃತ್ವದಲ್ಲಿ ಕಟೌಟ್‌ ಗೆ ಬಿಳಿ ಬಣ್ಣ ಬಳಿಯಲಾಗಿತ್ತು. ಹಾಗಾಗಿಯೇ ಕಿಡಿಗೇಡಿಗಳು ಪೊಲೀಸರ ಮೇಲೆಯೂ ದಾಳಿ ನಡೆಸಿದ್ದು ಕೆ.ಜೆ ಹಳ್ಳಿ, ಡಿ.ಜೆ ಹಳ್ಳಿ ಮಾದರಿಯಲ್ಲಿ ಗಲಭೆಗೆ ಸಂಚು ರೂಪಿಸಿದ್ದಿರಬಹುದು. ಆದರೂ ಪೊಲೀಸರು ಲಾಠಿ ಚಾರ್ಜ್ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣದ ಎನ್ ಐ ಎ ತನಿಖೆಯಲ್ಲಿ ಇದೇ ಶಿವಮೊಗ್ಗದ ತೀರ್ಥಹಳ್ಳಿಯ ಶಂಕಿತ ಭಯೋತ್ಪಾದಕರನ್ನು ಬಂಧಿಸಿದ್ದು ಗಮನಿಸಬೇಕಾದ ಅಂಶ. ಇವರ ಷಡ್ಯಂತ್ರದ ಎಲ್ಲಾ ಮಾಹಿತಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇದ್ದರೂ ಇದರಲ್ಲೂ ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿರುವುದು ರಾಜ್ಯದ ದುರಂತ.

ಈಗಾಗಲೇ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಪ್ರಕರಣದ ಕೇಸುಗಳನ್ನು ಹಿಂಪಡೆಯುವ ಬಗ್ಗೆ ಕಾಂಗ್ರೆಸ್ ಸರ್ಕಾರವು ತೀರ್ಮಾನಿಸಿದ್ದು ಅದಕ್ಕೆ ಪೂರಕವಾಗಿ ಸ್ವತಃ ಗೃಹ ಸಚಿವರೇ ಟಿಪ್ಪಣಿ ಬರೆದಿದ್ದು ಮಾಧ್ಯಮಗಳ ಮೂಲಕ ಪ್ರಸಾರವಾಗಿದೆ. ಸರ್ಕಾರದ ಮಟ್ಟದಲ್ಲಿಯೇ ಇಂತಹ ಕಿಡಿಗೇಡಿಗಳಿಗೆ ವ್ಯವಸ್ಥಿತ ವಾತಾವರಣ ನಿರ್ಮಾಣವಾದಾಗ ಸಹಜವಾಗಿ ಇಂತಹ ಗಲಭೆಗಳು ಹೆಚ್ಚಾಗುತ್ತವೆ.

ಏನೇ ಆದರೂ ಈ ಕಾಂಗ್ರೆಸ್ ಸರ್ಕಾರ ನಮ್ಮ ಪರ ಇದೆ ಎಂದುಕೊಂಡು ಗಲಭೆ ಸೃಷ್ಟಿಸಿ ಜನರಲ್ಲಿ ಭಯದ ವಾತಾವರಣ ಮೂಡಿಸುವ ಇಂತಹ ಕಿಡಿಗೇಡಿಗಳಿಗೆ ಕಟ್ಟುನಿಟ್ಟಿನ ಕ್ರಮಗಳ ಮೂಲಕ ಹೆಡೆಮುರಿ ಕಟ್ಟಬೇಕು, ಮತ್ತು ಈ ಕೂಡಲೇ ಅಲ್ಲಿನ ಹಿಂದೂಗಳ ಹಿತರಕ್ಷಣೆಯನ್ನು ಕಾಪಾಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!