ಕಾರ್ಕಳ: ದಲಿತ ಬಾಲಕಿ ಮೇಲೆ ಅತ್ಯಾಚಾರ ಯತ್ನ - ತಲೆಮರೆಸಿಕೊಂಡ ಯುವಕರು.!
ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ: ಪ್ರಕರಣ ದಾಖಲು

ಕಾರ್ಕಳ: ಪರಿಶಿಷ್ಟ ಜಾತಿಯ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿರುವ ಘಟನೆ ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಪ್ರಕರಣದ ಆರೋಪಿಗಳನ್ನು ನಿಂಜೂರಿನ ಸುಜಿತ್ ಪೂಜಾರಿ ಮತ್ತು ಅಭಿನಂದನ್ ಶೆಟ್ಟಿ ಎಂದು ಗುರುತಿಸಲಾಗಿದೆ.

ಈ ಸಂಬ0ಧ ಸೆಪ್ಟೆಂಬರ್ 28ರಂದು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತೆಯ ಮೇಲೆ  ನಿಂಜೂರು ಗ್ರಾಮದ ಬೋಪಾಡಿ ಸಮೀಪ ಅತ್ಯಾಚಾರಕ್ಕೆ ಯತ್ನಿಸಲಾಗಿದೆ ಎಂದು ದೂರು ನೀಡಲಾಗಿದೆ. ಆರೋಪಿಗಳ ವಿರುದ್ಧ ಕಲಂ   354 (D ) 506 ,R/W , 34 IPC , ಮತ್ತು ಕಲಂ 3 (2 ) (ವಿ-ಎ) SC - ST (POA ) ಆಕ್ಟ್ ೨೦೧೫ ಮತ್ತು ೧೧,೧೨ ,೧೭   ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಆರೋಪಿಗಳು ಸದ್ಯ ತಲೆಮೆರೆಸಿಕೊಂಡಿದ್ದು ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ ಎಂದು ತಿಳಿದು ಬಂದಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!