ಉಡುಪಿ: ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ - ಇಬ್ಬರು ಸೆರೆ.!
ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ಪೊಲೀಸ್ ರೈಡ್

ಹೆರ್ಗಾ ಗ್ರಾಮದ ಸರಳೇಬೆಟ್ಟುವಿನ ಮನೆಯೊಂದರಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆ ಸಂಬಂಧ ಇಬ್ಬರನ್ನು ಮಣಿಪಾಲ ಪೊಲೀಸರು ಅ.2ರಂದು ರಾತ್ರಿ ವೇಳೆ ಬಂಧಿಸಿದ್ದಾರೆ.

ಮಂಡ್ಯದ ಶಿವರಾಜ(38) ಮತ್ತು ಬಾಗಲಕೋಟೆಯ ನಿಂಗಪ್ಪ ಅಂಬಿಗೇರಾ (29) ಬಂಧಿತ ಆರೋಪಿಗಳು. ಇನ್ನೋರ್ವ ಆರೋಪಿ ನವೀನ್ ಗೌಡ ಎಂಬಾತ ತಲೆಮರೆಸಿಕೊಂಡಿದ್ದಾನೆ.

ಬಂಧಿತರಿಂದ ಎರಡು ಮೊಬೈಲ್ ಫೋನ್ ಹಾಗೂ 15 ಸಾವಿರ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಅಕ್ರಮ ಹಣಗಳಿಸುವ ಉದ್ದೇಶದಿಂದ ಹುಡುಗಿಯರನ್ನು ಪುಸಲಾಯಿಸಿ ಕರೆ ತಂದು ಅವರಿಗೆ ಬಲವಂತಾಗಿ ಪುರುಷರನ್ನು ಒದಗಿಸಿ ಅನೈತಿಕ ಚಟುವಟಿಕೆ ನಡೆಸುತ್ತಿರುವುದಾಗಿ ದೂರಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!