ಮೂಡಬಿದಿರೆ: ಕಾಲೇಜು ಸಿಬ್ಬಂದಿ ಆತ್ಮಹತ್ಯೆಗೆ ಶರಣು.!
ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಮೂಡಬಿದಿರೆ: ಮೂಡಬಿದಿರೆಯ ಖಾಸಗಿ ಕಾಲೇಜಿನಲ್ಲಿ ಉದ್ಯೋಗಿಯಾಗಿರುವ ಯುವಕನೋರ್ವ ಹಾಸ್ಟೇಲ್ ರೂಮಿನಲ್ಲಿ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬಾಗಲಕೋಟೆಯ ನಿವಾಸಿ ಹನುಮಂತಪ್ಪ (24) ಎಂದು ಗುರುತಿಸಲಾಗಿದೆ. 

ಯುವಕ ಜನವರಿಯಲ್ಲಿ ಖಾಸಗಿ ಕಾಲೇಜಿನಲ್ಲಿ ಉದ್ಯೋಗಕ್ಕೆ ಸೇರಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಹನುಮಂತಪ್ಪನ ಹೆತ್ತವರು ಮೂಡುಬಿದಿರೆಗೆ ಬಂದ ನಂತರ ಮೃತದೇಹವನ್ನು ಅವರು ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!