"BJP ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ" - ಸುಮಲತಾ
ಬಿಜೆಪಿ ಅಭ್ಯರ್ಥಿಯಾಗಿ ಮಂಡ್ಯದಿಂದ ಸುಮಲತಾ ಅಂಬರೀಶ್‌ ಸ್ಪರ್ಧೆ.!

ನಾನು ಬಿಜೆಪಿ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂಬ ಬಯಕೆ ಹೊಂದಿದ್ದೇನೆ. ಜೆಡಿಎಸ್‌-ಬಿಜೆಪಿ ಹೊಂದಾಣಿಕೆಯಿಂದ ರಾಜ್ಯದ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್‌ ಹೇಳಿದ್ದಾರೆ.

Mandya independent MP Sumalatha extends 'full support' to BJP- The New  Indian Express

ಈ ಕುರಿತು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ. ದೇಶದ ಪ್ರಧಾನಿಯಾಗಿ ಮೋದಿಯವರು ಮತ್ತೂಮ್ಮೆ ಅಧಿ ಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು. ಇನ್ನು ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಬಿಜೆಪಿಯು ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವ ಕ್ರಮ ಸರಿಯಲ್ಲ ಎಂದು ಮಾಜಿ ಸಚಿವ ನಾರಾಯಣಗೌಡ ಇದೇ ಸಂದರ್ಭ ತಿಳಿಸಿದ್ದಾರೆ.

Karnataka Polls: Mandya Independent MP Sumalatha Ambareesh Extends Full  Support To BJP | India News | Zee News

ಮಂಡ್ಯ ಕ್ಷೇತ್ರದಲ್ಲಿ ಹಾಲಿ ಸಂಸದೆ ಸುಮಲತಾ ಅಂಬರೀಶ್‌ ಅವರಿಗೆ ಬಿಜೆಪಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಬೇಕು. ಇಲ್ಲಿ ಜೆಡಿಎಸ್‌ ಅಭ್ಯರ್ಥಿ ಸ್ಪರ್ಧೆ ಮಾಡಲು ಯಾವುದೇ ಕಾರಣಕ್ಕೂ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳಬಾರದು. ಜೆಡಿಎಸ್‌ ಜತೆ ಹೊಂದಾಣಿಕೆ ಮಾಡಿಕೊಂಡಿರುವ ತೀರ್ಮಾನವನ್ನು ಪರಿಶೀಲನೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!