ಉಡುಪಿ: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ.!
ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಕಾಣೆಯಾಗಿದ್ದಾರೆ

ಉಡುಪಿ: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆಯಾದ ಘಟನೆ ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ಎಂಬಲ್ಲಿ ನಡೆದಿದ್ದು, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ನಿವಾಸಿ ಅಕ್ಷತಾ (25) ಎಂಬ ಮಹಿಳೆಯು ತನ್ನ ಇಬ್ಬರು ಹೆಣ್ಣುಮಕ್ಕಳಾದ ವಿದ್ಯಾಶ್ರೀ (7) ಹಾಗೂ ಮಲ್ಲು (4)ರೊಂದಿಗೆ ಕಾಣೆಯಾಗಿದ್ದಾರೆ.

ಅ.6 ರಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಮಕ್ಕಳೊಂದಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. ಅಕ್ಷತಾ 5 ಅಡಿ ಎತ್ತರ, ಸಾಧಾರಣ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಹಿಂದಿ, ತೆಲುಗು ಹಾಗೂ ತುಳು ಭಾಷೆ ಮಾತನಾಡುತ್ತಾರೆ. ವಿದ್ಯಾಶ್ರೀ 3 ಅಡಿ 6 ಇಂಚು ಎತ್ತರ, ಸಪೂರ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ. ಮಲ್ಲು 3 ಅಡಿ ಎತ್ತರ, ಸಾಧಾರಣ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ. ಇವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವAತೆ ಪ್ರಕಟಣೆ ತಿಳಿಸಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!