ಅರಬ್ಬೀ ಸಮುದ್ರದಲ್ಲಿ ಚಂಡಮಾರುತ - ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ.!
ಚಂಡಮಾರುತ ಸೃಷ್ಟಿ - ಭಾರೀ ಮಳೆಯ ಮುನ್ಸೂಚನೆ

ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಸೃಷ್ಟಿಯಾದ್ದರಿಂದ ಕೇರಳ, ತಮಿಳುನಾಡು ಹಾಗೂ ಕರ್ನಾಟಕದ ಕೆಲ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ.

ಜೊತೆಗೆ ಕೇರಳ ಮತ್ತು ಮಾಹೆಯ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಅದು ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡಿನ ಕರ್ನಾಟಕ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಲಕ್ಷದ್ವೀಪಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದೆರಡು ದಿನಗಳಿಂದ ಸುರಿದ ಭಾರೀ ಮಳೆಯಿಂದ ತತ್ತರಿಸಿರುವ ಕೇರಳದಲ್ಲಿ ಸೋಮವಾರ ಬೆಳಗ್ಗೆ ವರುಣ ತುಸು ಬಿಡುವು ನೀಡಿದ್ದಾನೆ. ಜಲಾವೃತ ಪ್ರದೇಶಗಳಿಂದ ನೀರು ಇಳಿಮುಖವಾಗಿದ್ದರೂ, ಮಧ್ಯಾಹ್ನದ ವೇಳೆ ಮಳೆ ಹೆಚ್ಚಾಗಿದೆ. ಕರ್ನಾಟಕದ ಉಡುಪಿ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!