ಮಂಗಳೂರು: ಕೊರಗ ಜನಾಂಗದ ವೇಷ ಧರಿಸುವಂತಿಲ್ಲ.!!
ಕೊರಗ ಜನಾಂಗದವರ ವೇಷ ಧರಿಸಿದರೆ 5ರಿಂದ 6 ವರ್ಷ ಜೈಲು ಶಿಕ್ಷೆ: ಸಮಾಜ ಕಲ್ಯಾಣ ಇಲಾಖೆ ಎಚ್ಚರಿಕೆ

ಮಂಗಳೂರು: ದಸರಾ ಆಚರಣೆಯ ಸಮಯದಲ್ಲಿ ಬೇರೆ ಜಾತಿಯ ಜನಾಂಗದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ ಮನೆಗಳ ಮುಂದೆ ಕುಣಿದು ಜಾತಿ ನಿಂದನೆ ಮಾಡುವುದನ್ನು ನಿಷೇಧಿಸಲಾಗಿದೆ. ವೇಷ ಧರಿಸಿ ಜಾತಿ ನಿಂದನೆ ಮಾಡಿದರೆ ಜೈಲು ಶಿಕ್ಷೆ ವಿಧಿಸುವ ಎಚ್ಚರಿಕೆ ನೀಡಲಾಗಿದೆ.

ಜಾತ್ರೆ, ಕಂಬಳ ಮೊದಲಾದ ಸಾರ್ವಜನಿಕ ಸಮಾರಂಭಗಳಲ್ಲಿ ಕೊರಗ ಜನಾಂಗದವರನ್ನು ಡೋಲು ಬಡಿಸಿ ಕುಣಿತಕ್ಕೆ ಬಳಸಿಕೊಳ್ಳುವುದನ್ನೂ ನಿಷೇಧಿಸಲಾಗಿದೆ. 

ಬೇರೆ ಜನಾಂಗದವರ ಹೆಂಗಸರಿಗೆ ಸೀಮಂತದ ದಿನ ಕೊರಗ ಜನಾಂಗದ ಮಹಿಳೆಯನ್ನು ಕರೆದು ಎಂಜಲು ಊಟ ಮಾಡಿಸಿ ಸೀಮಂತಳ ಮೇಲಿರುವ ದೃಷ್ಟಿ ತೆಗೆಯಲು ಬಳಸಿಕೊಳ್ಳುವುದು ನಿಷೇಧಿಸಲಾಗಿದೆ. ಈ ಎಲ್ಲ ಚಟುವಟಿಕೆಗಳು ಕೊರಗರ ಅಜಲು ಪದ್ಧತಿ ನಿಷೇಧ ಕಾಯಿದೆಯಡಿ ಬರುವುದರಿಂದ ಇಂತಹ ಆಚರಣೆಗಳು ಕಂಡು ಬಂದಲ್ಲಿ ಅಂತಹ ಪ್ರಕರಣಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ನಿಷೇಧ ಅಧಿನಿಯಮ 1989ರ ಅಡಿಯಲ್ಲಿ ನೋಂದಾಯಿಸಿ ಕಾನೂನು ಕ್ರಮ ಜರುಗಿಸಲಾಗುವುದು. 5ರಿಂದ 6 ವರ್ಷಗಳ ವರೆಗೆ ಕಾರಾಗೃಹವಾಸ ಮತ್ತು 5000 ರೂ. ದಂಡ ವಿಧಿಸಲಾಗುವುದು.

ಇಂಥ ಚಟುವಟಿಕೆ ಕಂಡುಬಂದರೆ ಕೊರಗರ ಅಜಲು ಪದ್ದತಿ ನಿಷೇಧ ಕಾಯ್ದೆಯಡಿ 5ರಿಂದ 6 ವರ್ಷಗಳವರೆಗೆ ಕಾರಾಗೃಹವಾಸ ಮತ್ತು 5000 ರೂ. ದಂಡ ವಿಧಿಸಲಾಗುವುದು. ದಸರಾ ಹಬ್ಬಗಳ ಸಮಯ ಇಂಥ ಪ್ರಸಂಗಗಳು ಕಂಡುಬಂದಲ್ಲಿ ಹತ್ತಿರದ ಪೋಲೀಸ್ ಠಾಣೆಗೆ ತಿಳಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!